ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಒಂದೇ ದಿನದಲ್ಲಿ 8,000 ಅರ್ಜಿಗಳು: ಪೊಲೀಸ್ ಆಯುಕ್ತರ ಕರೆಗೆ ಉತ್ತಮ ಪ್ರತಿಕ್ರಿಯೆ
ಲಾಕ್ಡೌನ್ ವೇಳೆ ಪೊಲೀಸ ಜೊತೆಗೆ ಕೈಜೋಡಿಸುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ್ದ ಕರೆಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಒಂದೇ ದಿನದಲ್ಲಿ ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಬರೋಬ್ಬರಿ 8,000 ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಲಾಕ್ಡೌನ್ ವೇಳೆ ಪೊಲೀಸ ಜೊತೆಗೆ ಕೈಜೋಡಿಸುವಂತೆ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನೀಡಿದ್ದ ಕರೆಗೆ ಸಾರ್ವಜನಿಕ ವಲಯದಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಒಂದೇ ದಿನದಲ್ಲಿ ಸಿವಿಲ್ ಪೊಲೀಸ್ ವಾರ್ಡನ್ ಹುದ್ದೆಗೆ ಬರೋಬ್ಬರಿ 8,000 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಸಾಕಷ್ಟು ಪೊಲೀಸರು ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು, ಲಾಕ್ಡೌನ್ ನಿರ್ವಹಣೆ ಕೆಲಸಗಳಿಗೆ ಸ್ವಯಂ ಸೇವಕರ ನೇಮಕಕ್ಕೆ ಚಿಂತನೆ ನಡೆಸಿದ್ದರು. ಇದಕ್ಕಾಗಿ ವೆಬ್'ಸೈಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿಕೊಂಡಿದ್ದರು.
ಈ ಮನವೆಗೆ ಸ್ಪಂದನೆ ನೀಡಿರುವ 8000 ಜನರು ಸ್ವಯಂ ಸೇವಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇವುದನ್ನು ಪರಿಶೀಲಿಸಿ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


