ಬೈಕ್‌ಗಳ ನಡುವೆ ಡಿಕ್ಕಿ: ಪೇದೆ ಸಾವು, ಎಎಸ್ ಐ ಸ್ಥಿತಿ ಗಂಭೀರ
ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಪೇದೆ ಸಾವಿಗೀಡಾಗಿ,ಎಎಸೈ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.

ಮಂಡ್ಯ: ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಪೇದೆ ಸಾವಿಗೀಡಾಗಿ,ಎಎಸೈ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ತೊರೆಶೆಟ್ಟಹಳ್ಳಿ ಗ್ರಾಮದ ಬಳಿ ನಡೆದಿದೆ.
ಅರುಣ್(೩೦ ವರ್ಷ) ಮೃತ ಡಿಎಆರ್ ಪೇದೆಯಾಗಿದ್ದು ಎಎಸೈ ಬಾಳಯ್ಯ ತೀವ್ರವಾಗಿ ಗಾಯಗೊಂಡಿದ್ದಾರೆ. ತೊಪ್ಪನಹಳ್ಳಿಯ ವ್ಯಕ್ತಿಯೊಬ್ಬರ ಅಂಗರಕ್ಷಕರಾಗಿ ಕೆಲಸ ಮಾಡುತ್ತಿದ್ದ ಡಿಎಆರ್ ಪೇದೆ ಅರುಣ್ ಅವರು ಎಎಸೈ ಬಾಳಯ್ಯ ಅವರೊಟ್ಟಿಗೆ ತಮ್ಮ ಬೈಕ್‌ನಲ್ಲಿ ಇಂದು ಬೆಳಿಗ್ಗೆ ಮದ್ದೂರಿನಿಂದ ಕೆಸ್ತೂರು ಕಡೆಗೆ ಹೋಗುತ್ತಿದ್ದರು.
ಈ ವೇಳೆ ರಸ್ತೆಗೆ ಅಡ್ಡ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ,ಪರಿಣಾಮವಾಗಿ ಸ್ಥಳದಲ್ಲೇ ಗನ್ ಮ್ಯಾನ್ ಅರುಣ್ ಸಾವಿಗೀಡಾದರೆ, ಗಾಯಗೊಂಡ ಎಎಸೈ ಬಾಳಯ್ಯ ಅವರನ್ನು ಮದ್ದೂರು ಪಟ್ಟಣದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


