ಕೊರೊನಾ ವಿರುದ್ಧ ಸಮರದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಎಲ್ಲ ನೆರವು: ಸಚಿವ ಡಿ.ವಿ. ಸದಾನಂದ ಗೌಡ
ಕೊರೊನಾ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು: ಕೊರೊನಾ ಮಹಾಮಾರಿಯನ್ನು ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಕೊರೊನಾ ಮಹಾಮಾರಿ ನಿಯಂತ್ರಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನೇತೃತ್ವದಲ್ಲಿ ನಡೆಸಿದ ಸಚಿವರು, ಸಂಸದರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂ ಡ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಭರವಸೆ ನೀಡಿದರು. ಕೊರೊನಾ ವಿರುದ್ಧದ ಹೋರಾಟದ ವಿಚಾರವಾಗಿ ಕೇಂದ್ರ ಸರ್ಕಾರವು ರಾಜ್ಯಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು ಅಗತ್ಯ ನೆರವು ನೀಡುತ್ತಿದೆ. ಇನ್ನೂ ಏನೆಲ್ಲ ಅಗತ್ಯವೋ ಅದನ್ನು ಮಾಡಲು ನಾವು ಸಿದ್ಧರಿದ್ದೇವೆ ಎಂದರು.
ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ನೆರವು ನೀಡಲು ಸರಕಾರ ಬದ್ಧ. ರಾಜ್ಯ ಸರ್ಕಾರ ಕೇಳುವ ಎಲ್ಲಾ ರೀತಿಯ ನೆರವಿಗೆ ಕೇಂದ್ರ ಸರ್ಕಾರದಿಂದ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


