ರಾತ್ರೋರಾತ್ರಿ ಕೆಸಿ ಜನರಲ್ ಆಸ್ಪತ್ರೆಗೆ ಸುಧಾಕರ್ ಭೇಟಿ: ಅವ್ಯವಸ್ಥೆ ಕಂಡು ವೈದ್ಯರ ತರಾಟೆ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಆಸ್ಪತ್ರೆಯ ಅವ್ಯವಸ್ಥೆ ಕಂಡು ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರನ್ನು ಸಚಿವರು ತರಾಟೆ ತೆಗೆದುಕೊಂಡಿದ್ದಾರೆ. ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವರು, ವೈದ್ಯರು, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ, ಚಿಕಿತ್ಸೆ, ಶುಚಿತ್ವ ಹಾಗೂ ಮಾರ್ಗಸೂಚಿ ಪಾಲನೆ ಕುರಿತು ಪರಿಶೀಲನೆ ನಡೆಸಿದರು.
ಕೋವಿಡ್ ಕೆಲಸದಲ್ಲಿ ನಿರತರಾದವರಿಗೆ ನೀಡಿರುವ ಉಪಕರಣಗಳ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್, ಆಸ್ಪತ್ರೆಯಲ್ಲಿ ಇರುವ ದಾಸ್ತಾನು ವಿವರಗಳನ್ನೂ ಸಹ ಸಚಿವ ಸುಧಾಕರ್ ಇದೇ ಸಂದರ್ಭದಲ್ಲಿ ಪರಿಶೀಲನೆ ನಡೆಸಿದರು. ಗುರುವಾರ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಘಟನೆ ನಡೆದ ಕುರಿತು ಸಚಿವರು ಸಂಬಂಧಪಟ್ಟವರ ಬಳಿಯಿಂದ ಮಾಹಿತಿ ಪಡೆದರು.
35 ಮಂದಿ ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ 19 ಪಾಸಿಟಿವ್ ಆಗಿರುವುದಕ್ಕೆ ಅಧೀಕ್ಷಕರನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಸಿಬ್ಬಂದಿಗೆ ರಕ್ಷಣೆ ಕೊಡಲು ವಿಫಲರಾಗಿರುವ ನೀವು ರೋಗಿಗಳನ್ನು ಹೇಗೆ ನೋಡಿಕೊಳ್ಳುತ್ತಿದ್ದೀರಿ ಎಂದು ಸಚಿವರು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


