ವಿಕ್ಟೋರಿಯಾ ಆಸ್ಪತ್ರೆ ಹೆಸರಿನಲ್ಲಿ ಬೇರೆ ರಾಜ್ಯದ ವಿಡಿಯೋ ವೈರಲ್: ಆರೋಪಿ ಬಂಧನ- ಭಾಸ್ಕರ್ ರಾವ್
ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರು:ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾದ ಆಸ್ಪತ್ರೆಯ ವಿಡಿಯೋ ಎಂದು ಹೇಳಿ ನಕಲಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಇದು ನಕಲಿ ವಿಡಿಯೋವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಅತ್ಯುತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
ಬಂಧಿತನನ್ನು ತಿಲಕ್ ನಗರದ ಸಮೀರವುಲ್ಲಾ ಎಂದು ಗುರುತಿಸಲಾಗಿದೆ. ಹೊರ ರೋಗಿ ವಿಭಾಗದ ಕೊಠಡಿ ಮುಂಭಾಗ
ಅಪಾರ ಸಂಖ್ಯೆಯಲ್ಲಿ ರೋಗಿಗಳು ನೆರೆದಿರುವ ವಿಡಿಯೋ ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಹೇಳಿ ಆರೋಪಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಅಪ್ ಲೋಡ್ ಮಾಡಿದ್ದ.ಅದು ಟ್ವಿಟರ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಕ್ಷೀಪ್ರಗತಿಯಲ್ಲಿ ಕಾರ್ಯಾಚರಣೆ
ನಡೆಸಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೇರೆ ರಾಜ್ಯದ ವಿಡಿಯೋವನ್ನು ವಿಕ್ಟೋರಿಯಾ ಆಸ್ಪತ್ರೆಯದ್ದು ಎಂದು ಆರೋಪಿ ಬರೆದುಕೊಂಡಿದ್ದ. ವೈದ್ಯರ ಕೊಠಡಿ ಎದುರು ಜನರು ಗುಂಪಾಗಿ ನಿಂತುಕೊಂಡಿದ್ದರು. ಜನ ಸಂದಣಿಯೂ ಹೆಚ್ಚಿತ್ತು. ಈ ದೃಶ್ಯ ವಿಡಿಯೋದಲ್ಲಿತ್ತು. ಪರಿಶೀಲನೆ ನಡೆಸಿದಾಗ ಇದು ವಿಕ್ಟೋರಿಯಾ ಆಸ್ಪತ್ರೆಯದ್ದು ಅಲ್ಲವೆಂಬುದು ತಿಳಿಯಿತು ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವಿಡಿಯೋ ಪಾಟ್ನಾದ ಏಮ್ಸ್ ನದ್ದು ಎಂದು ವೈದ್ಯಕೀಯ ಸಂಸ್ಥೆ ನಿರ್ದೇಶಕಿ- ಡೀನ್ ಡಾ. ಸಿ. ಆರ್. ಜಯಂತಿ ಸ್ಪಷ್ಪಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


