ರಾಜ್ಯ

ಕೊರೋನಾ ಭಯ: ಅಂತ್ಯ ಸಂಸ್ಕಾರಕ್ಕೂ ಬಾರದ ಸಂಬಂಧಿಕರು, ಒಬ್ಬಂಟಿಯಾಗಿ ಪತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಮಹಿಳೆ!

ಕೊರೋನಾ ವೈರಸ್ ಪ್ರತೀಯೊಬ್ಬ ವ್ಯಕ್ತಿಯನ್ನೂ ಅತಂಕಕ್ಕೊಳಗಾಗುವಂತೆ ಮಾಡಿದೆ. ಕೊರೋನಾ ಅಲ್ಲದೆ, ಇತರೆ ರೋಗಗಳಿಂದ ಸಾವನ್ನಪ್ಪಿದ್ದರೂ ಕೂಡ ಜನರು ಸಹಾಯಕ್ಕೆ ಬರಲು ಹಿಂದೂ ಮುಂದು ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊರೋನಾ ಭಯ: ಅಂತ್ಯ ಸಂಸ್ಕಾರಕ್ಕೂ ಬಾರದ ಸಂಬಂಧಿಕರು, ಒಬ್ಬಂಟಿಯಾಗಿ ಪತಿಯ ಅಂತ್ಯ ಸಂಸ್ಕಾರ ನೆರವೇರಿಸಿದ ಮಹಿಳೆ!
ತಳ್ಳೋಗಾಡಿಯಲ್ಲಿ ಶವ ಸಾಗಿಸುತ್ತಿರುವ ಮಹಿಳೆ
Published On :

ಅಥಣಿ: ಕೊರೋನಾ ವೈರಸ್ ಪ್ರತೀಯೊಬ್ಬ ವ್ಯಕ್ತಿಯನ್ನೂ ಅತಂಕಕ್ಕೊಳಗಾಗುವಂತೆ ಮಾಡಿದೆ. ಕೊರೋನಾ ಅಲ್ಲದೆ, ಇತರೆ ರೋಗಗಳಿಂದ ಸಾವನ್ನಪ್ಪಿದ್ದರೂ ಕೂಡ ಜನರು ಸಹಾಯಕ್ಕೆ ಬರಲು ಹಿಂದೂ ಮುಂದು ನೋಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಬೆಳಗಾವಿ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಅಮಾನವೀಯ ಘಟನೆ ನಡೆದಿದೆ. ವ್ಯಕ್ತಿಯೋರ್ವ ಅನಾರೋಗ್ಯದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಸಹಾಯಕ್ಕೆ ಯಾರೂ ಧಾವಿಸದ ಹಿನ್ನೆಲೆಯಲ್ಲಿ ಆತನ ಪತ್ನಿ ತಳ್ಳೋ ಗಾಡಿಯಲ್ಲಿ ಶವ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. 

ಸದಾಶಿವ ಹಿರಟ್ಟಿ (55) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಅನಾರೋಗ್ಯದಿಂದ ಬಳಲಿ ತೀರಿಹೋದ ಪತಿಯ ಅಂತ್ಯಸಂಸ್ಕಾರಕ್ಕೆ ಯಾರೂ ಬಾರದ ಹಿನ್ನೆಲೆಯಲ್ಲಿ ತಳ್ಳೋ ಗಾಡಿಯಲ್ಲಿ ಪರಿಚಯಸ್ಥರೊಬ್ಬರ ಸಹಾಯದಿಂದ ಶವ ಸಾಗಿಸಿದ್ದಾರೆ. 

ಸರ್ಕಾರಿ ಆಸ್ಪತ್ರೆಯ ಮುಂದೆ ಸದಾಶಿವ ಅವರು ಚಪ್ಪಲಿ ಹೊಲಿದುಕೊಂಡು ಜೀವನ ನಡೆಸುತ್ತಿದ್ದರು. ಕೆಲ ದಿನಗಳ ಹಿಂದೆ ಮನೆಹೆ ಹೋಗಿ ಮಲಗಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಬಳಿಕ ಸ್ಥಳೀಯರು ಆತನ ಪತ್ನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೊರೋನಾದಿಂದ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಸ್ಥಳೀಯರು, ಸಂಬಂಧಿಕರಾರು ಹತ್ತಿರಕ್ಕೆ, ಸಹಾಯಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆ ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ಶವ ಸಾಗಿಸಿ, ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.