ಕಲಬುರಗಿಯಲ್ಲಿ ಮತ್ತೆ ಜುಲೈ 27ರವರೆಗೆ ಲಾಕ್ ಡೌನ್ ವಿಸ್ತರಣೆ!
ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ರವಿವಾರ ಆದೇಶ ಹೊರಡಿಸಿದ್ದಾರೆ.

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ಅವರು ರವಿವಾರ ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ ಅನ್ವಯವಾಗುವುದಿಲ್ಲ.
ಅಲ್ಲದೆ ಭಾನುವಾರದ ಲಾಕ್ ಡೌನ್ ಗೂ ಈ ಆದೇಶ ಅನ್ವಯಿಸುವುದಿಲ್ಲ ಎಂದು ಡಿ.ಸಿ.ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕಲಬುರಗಿಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ತೀರ್ಮಾನವನ್ನು ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


