ಕೋಲಾರ: ಸೋದರನಿಗೆ ಕೊರೋನಾ ಸೋಂಕು, ಕೂಲಿ ಕಾರ್ಮಿಕ ಆತ್ಮಹತ್ಯೆ
ಸೋದರನಿಗೆ ಕೊರೋನಾ ಸೋಂಕು ದೃಢವಾಗಿರುವ ವಿಚಾರ ತಿಳಿಯುತ್ತಲೇ ಭಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ನಡೆದಿದೆ.

ಕೋಲಾರ: ಸೋದರನಿಗೆ ಕೊರೋನಾ ಸೋಂಕು ದೃಢವಾಗಿರುವ ವಿಚಾರ ತಿಳಿಯುತ್ತಲೇ ಭಯಗೊಂಡ ವ್ಯಕ್ತಿಯೊಬ್ಬ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರದ ಗಾಂಧಿನಗರದಲ್ಲಿ ನಡೆದಿದೆ.
ಶನಿವಾರ ರಾತ್ರಿ ನಡೆದ ಘಟನೆಯಲ್ಲಿ ನಾಗರಾಜ್ (37) ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ತಮ್ಮನಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.ಆತನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇತ್ತ ನಾಗರಾಜ್ ಮಾತ್ರ ದುಡುಕಿನ ನಿರ್ಧಾರಕ್ಕೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೊರೋನಾ ತಗುಲಿರುವ ತಮ್ಮನೊಡನೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ತನಗೂ ಸಹ ಸೋಂಕು ತಗುಲಿರಬಹುದೆಂದು ಭಯಗೊಂಡು ನಾಗರಾಜ್ ಈ ಕೃತ್ಯ ಎಸಗಿದ್ದಾನೆ ಎಂದು ಅವರ ಕುಟುಂಬಸ್ಥರು ಹೇಳಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಗಲ್ ಪೇಟೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


