ರಾಜ್ಯ

ಸೋಂಕಿತರ ಚಿಕಿತ್ಸೆಗೆ ಶೇ.50 ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆ ಒಪ್ಪಿಗೆ

ಕೊರೋನಾ ಸೋಂಕಿತರಿಗೆ ಉಂಟಾಗುತ್ತಿರುವ ಹಾಸಿಗೆ ಕೊರತೆ ನೀಗಿಸಲು ಒಂದು ವಾರದೊಳಗಾಗಿ ಆಸ್ಪತ್ರೆಯ ಸಾಮರ್ಥ್ಯದ ಶೇ.50ರಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಡಲು ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಬೆಂಗಳೂರಿನ ಆಸ್ಪತ್ರೆಯ ಆಡಳಿತ ಮಂಡಳಿಗಳು ಕೊನೆಗೂ ಒಪ್ಪಿಗೆ ನೀಡಿವೆ.

ಸೋಂಕಿತರ ಚಿಕಿತ್ಸೆಗೆ ಶೇ.50 ಹಾಸಿಗೆ ನೀಡಲು ಖಾಸಗಿ ಆಸ್ಪತ್ರೆ ಒಪ್ಪಿಗೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಸೋಂಕಿತರಿಗೆ ಉಂಟಾಗುತ್ತಿರುವ ಹಾಸಿಗೆ ಕೊರತೆ ನೀಗಿಸಲು ಒಂದು ವಾರದೊಳಗಾಗಿ ಆಸ್ಪತ್ರೆಯ ಸಾಮರ್ಥ್ಯದ ಶೇ.50ರಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಡಲು ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಬೆಂಗಳೂರಿನ ಆಸ್ಪತ್ರೆಯ ಆಡಳಿತ ಮಂಡಳಿಗಳು ಕೊನೆಗೂ ಒಪ್ಪಿಗೆ ನೀಡಿವೆ. 

ಈ ಹಿಂದೆ ಸೂಚಿನೆ ನೀಡಿದ್ದರೂ ಹಾಸಿಗೆ ಮೀಸಲಿಡಲು ಮೀನಾಮೇಷ ಎಣಿಸಿದ್ದ ಆಸ್ಪತ್ರೆಗಳೂ ಕೊನೆಗೂ ಸರ್ಕಾರದ ಪಟ್ಟು ಹಾಗೂ ಕಠಿಣ ಕ್ರಮದ ಎಚ್ಚರಿಕೆಗಳಿಗೆ ಬಗ್ಗಿವೆ. 

ನಿನ್ನೆಯಷ್ಟೇ ಸಿಎಂ ಯಡಿಯೂರಪ್ಪ ಅವರು ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳೊಂದಿಗೆ ಶನಿವಾರ ಮಹತ್ವದ ಸಭೆ ನಡೆಸಿ ಮಾತುಕತೆ ನಡೆಸಿದರು. 

ಮಾತುಕತೆ ವೇಳೆ ವಾರದೊಳಗಾಗಿ ಹಾಸಿಗೆಗಳನ್ನು ಸೋಂಕಿತರಿಗೆ ಮೀಸಲಿಡಬೇಕು ಎಂದು ತಾಕೀತು ಮಾಡಿದರು. ಇದೀಗ ಈ ಆದೇಶಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಮ್ಮತಿ ಸೂಚಿಸಿವೆ. 

ಕೊರೋನಾ ಕೇರ್ ಕೇಂದ್ರದಲ್ಲಿ ಈಗಾಗಲೇ ಸಾಕಷ್ಟು ಹಾಸಿಗೆಗಳಿವೆ. ಆದರೆ, ಲಕ್ಷಣ ಇರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಇದೀಗ ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ನೀಡಲು ಒಪ್ಪಿವೆ. ಕೆಲವರು ಶೇ.100ರಷ್ಟು ನೀಡಲು ಒಪ್ಪಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.