ಬೆಂಗಳೂರಿನಿಂದ ತುಮಕೂರು ಜಿಲ್ಲೆಗೆ, ನಗರಕ್ಕೆ ಆಗಮಿಸುವವರನ್ನು ಮನೆಗೆ ಸೇರಿಸಿಕೊಳ್ಳಬೇಡಿ: ಸಚಿವ ಮಾಧುಸ್ವಾಮಿ
ಬೆಂಗಳೂರಿನಿಂದ ಜಿಲ್ಲೆಗೆ ಅಥವಾ ನಗರಕ್ಕೆ ಬರುವವರನ್ನು ಊರಿಗೆ ಸೇರಿಸಿ ಕೊಳ್ಳಬೇಡಿ.ಅಲ್ಲಿಂದ ಬಂದವರ ಬಗ್ಗೆ ಜಿಲ್ಲಾಡಳಿತಕ್ಕೆ,ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ತುಮಕೂರು: ಬೆಂಗಳೂರಿನಿಂದ ಜಿಲ್ಲೆಗೆ ಅಥವಾ ನಗರಕ್ಕೆ ಬರುವವರನ್ನು ಊರಿಗೆ ಸೇರಿಸಿ ಕೊಳ್ಳಬೇಡಿ.ಅಲ್ಲಿಂದ ಬಂದವರ ಬಗ್ಗೆ ಜಿಲ್ಲಾಡಳಿತಕ್ಕೆ,ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ನಗರದಲ್ಲಿಂದು ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯಲ್ಲಿ ಪಿಪಿಇ ಕಿಟ್ ವಿತರಿಸಿ ಮಾತನಾಡಿದ ಅವರು,ಕಂಟೈನ್ಮೆಂಟ್ ಝೋನ್ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ.ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ಡೌನ್ ಮಾಡುತ್ತೇವೆ ಎಂದರು.
ಬೆಂಗಳೂರಿನಿಂದ ಬಂದವರಿಂದ ಸಮಸ್ಯೆಯಾಗುತ್ತಿದೆ.ಅವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ ಹಳ್ಳಿಗಳಲ್ಲಿ ಕೊರೋನಾ ಪ್ರಕರಣ ಬರುತ್ತಿರಲಿಲ್ಲ.ಎಲ್ಲರೂ ಬಂದರು, ಹೋದರು ಮನೆ ಸೇರಿಕೊಂಡರೂ ಯಾರೂ ನಮಗೆ ಮಾಹಿತಿ ನೀಡಲಿಲ್ಲ. ಪಾಸಿಟಿವ್ ಬಂದಾಗ ಊರಿಗೆ ಊರೇ ಸೀಲ್ಡೌನ್ ಮಾಡಿದ್ವಿ.ಬೆಂಗಳೂರಿನಿಂದ ಬಂದರೆ ಮಾಹಿತಿ ನೀಡಿ ಅಂತ ಜನರಿಗೆ ಜಾಗೃತಿ ಹಾಗೂ ಪ್ರಚಾರ ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.
ಪ್ರಸ್ತುತ ಕೋವಿಡ್ ಪರೀಕ್ಷೆ ಮಾಡಿದ 48 ಗಂಟೆ ಒಳಗೆ ರಿಸಲ್ಟ್ ಕೊಡುತ್ತಿದ್ದೇವೆ.ಅಲ್ಲಿವರೆಗೂ ಬೆಂಗಳೂರಿನಿಂದ ಬಂದವರು ಯಾರ ಸಂಪರ್ಕಕ್ಕೆ ಬರಬಾರದು.ಊರಿನ ಹೊರಗೆ ಅಥವಾ ಬೇರೆಲ್ಲಾದ್ರೂ ಪ್ರತ್ಯೇಕವಾಗಿ ವಾಸ್ತವ್ಯ ಹೂಡಬೇಕು.ಪರೀಕ್ಷೆ ವರದಿ ನೆಗೆಟಿವ್ ಬಂದರೆ ಮಾತ್ರ ಮನೆಗೆ ಹೋಗಲಿ,ಪಾಸಿಟಿವ್ ಬಂದ್ರೆ ಆಸ್ಪತ್ರೆಗೆ ದಾಖಲಿಸುತ್ತೇವೆ.ಈ ಹೊರಗಿನಿಂದ ಬಂದವರು ಜಿಲ್ಲಾಡಳಿತದ ನಿಯಮಾವಳಿ ಪಾಲಿಸದಿದ್ದರೆ ಅವರ ವಿರುದ್ಧ ಎಫ್ಐ ಆರ್ ದಾಖಲಿಸಲು ಅವಕಾಶವಿದೆ.ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


