ರಾಜಧಾನಿಯಲ್ಲಿ ನಾಳೆಯಿಂದ ಅನ್‌ಲಾಕ್: ಕೆಲವು ವಲಯಗಳಲ್ಲಿ ನಿರ್ಬಂಧ ಮುಂದುವರಿಕೆ; ಅಶ್ವತ್ಥನಾರಾಯಣ
ಲಾಕ್‌ಡೌನ್ ಜಾರಿಗೆ ಮೊದಲು ಇದ್ದ ಸ್ಥಿತಿಗೆ ರಾಜಧಾನಿ ನಾಳೆ ಮರಳಲಿದೆ. ಆದರೆ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ತಿಳಿಸಿದ ಕೆಲವು ವಲಯಗಳು ಅನ್‌ಲಾಕ್ ಆಗಲಿವೆ. ಆದರೆ ಜಿಮ್, ಶಾಲೆ ಮುಂತಾದ ವಲಯಗಳ ಮೇಲಿನ ನಿರ್ಬಂಧ ಮುಂದುವರಿಯಲಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. `

ಬೆಂಗಳೂರು: ಲಾಕ್‌ಡೌನ್ ಜಾರಿಗೆ ಮೊದಲು ಇದ್ದ ಸ್ಥಿತಿಗೆ ರಾಜಧಾನಿ ನಾಳೆ ಮರಳಲಿದೆ. ಆದರೆ ಲಾಕ್‌ಡೌನ್ ಮಾರ್ಗಸೂಚಿಗಳಲ್ಲಿ ತಿಳಿಸಿದ ಕೆಲವು ವಲಯಗಳು ಅನ್‌ಲಾಕ್ ಆಗಲಿವೆ. ಆದರೆ ಜಿಮ್, ಶಾಲೆ ಮುಂತಾದ ವಲಯಗಳ ಮೇಲಿನ ನಿರ್ಬಂಧ ಮುಂದುವರಿಯಲಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. `
ನಗರದಲ್ಲಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ದೊಡ್ಡ ಮಟ್ಟದಲ್ಲಿ ಜನಸಂದಣಿ ಸೇರುವ ಸ್ಥಳಗಳಲ್ಲಿ ಕೆಲವು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ. ಅಲ್ಲಿ ಇನ್ನೂ ಕೆಲವು ದಿನ ನಿರ್ಬಂಧ ಮುಂದುವರಿಸಬೇಕಾಗುತ್ತದೆ. ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್ ಮಾಡಿದರೆ ನಾವು ಅದಕ್ಕೆ ಬೆಂಬಲ ನೀಡುತ್ತೇವೆ ಎಂದರು.
ಒಂದು ವಾರದ ಲಾಕ್ ಡೌನ್ ಮನಸ್ಸಿಲ್ಲದ ಮನಸ್ಸಿನಲ್ಲಿ ಜಾರಿಗೊಳಿಸಲಾಯಿತು. ವಿವಿಧ ಸಂಘಟನೆಗಳು, ತಜ್ಞರು, ವಿರೋಧ ಪಕ್ಷದವರು ನೀಡಿದ ಸಲಹೆಯಂತೆ ಅದನ್ನು ಜಾರಿಗೊಳಿಸಲಾಯಿತು. ಅದಕ್ಕೂ ಸಾಕಷ್ಟು ರೀತಿಯಲ್ಲಿ ತಯಾರಿ ಮಾಡಲಾಗಿತ್ತು. ಲಾಕ್‌ಡೌನ್‌ನಿಂದ ಸೋಂಕು ವೇಗವಾಗಿ ತಡೆಯುವುದನ್ನು ನಿಯಂತ್ರಣ ಮಾಡಬಹುದು ಎಂಬ ಉದ್ದೇಶವಿತ್ತು. ಸೋಂಕಿನ ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯಲು ಸಾಧ್ಯವಾಗಿದೆ ಎಂದರು.
ಅನ್‌ಲಾಕ್ ಆದ ಬಳಿಕವೂ ನಿಯಮಗಳನ್ನು ಕಟ್ಟು ನಿಟ್ಟಿನ ನಿಯಮ ಪಾಲನೆ ಮಾಡಬೇಕಾಗುತ್ತದೆ. ಇದಕ್ಕಾಗಿ ಬೂತ್‌ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದೆ. ಈ ತಂಡದಲ್ಲಿ 5-6ರಿಂದ ಮಂದಿ ಅಧಿಕಾರಿಗಳು ಇರುತ್ತಾರೆ. ಇವರು ಕೊರೊನಾ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‌ಮೆಂಟ್ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉಪ ಮುಖ್ಯಮಂತ್ರಿ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


