ಉಡುಪಿ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು, ಪುತ್ತಿಗೆ ಮಠ ಸೀಲ್ ಡೌನ್!
ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಮಠದ ಮೂಲಗಳ ಪ್ರಕಾರ, ಜುಲೈ 20ರಂದು ಸ್ವಾಮೀಜಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಂತರ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಪುತ್ತಿಗೆ ಶ್ರೀಗಳು 15 ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಆಗಮಿಸಿದ ಶ್ರೀಗಳಿಗೆ ಕೆಲ ದಿನಗಳಿಂದ ಜ್ವರ, ಗಂಟಲು ನೋವಿನಿಂದ ಬಳಲುತ್ತಿದ್ದರು ಎಂದು ವರದಿಯಾಗಿದೆ.
ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆ ಮಠವನ್ನು ಸೀಲ್ ಡೌನ್ ಮಾಡಲಾಗಿದೆ.
ಕೊರೋನಾ ಸಂದರ್ಭದಲ್ಲಿಯೂ ಅನೇಕ ಭಕ್ತರು ಮಠಕ್ಕೆ ಆಗಮಿಸಿ, ಸ್ವಾಮೀಜಿಯಿಂದ ಆಶೀರ್ವಾದ ಪಡೆದುಕೊಂಡಿದ್ದರು. ಇದರಿಂದಾಗಿ ಸೋಂಕು ತಗುಲಿರುವ ಸಾಧ್ಯತೆ ಹೆಚ್ಚಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


