ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು
ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಶಿವಮೊಗ್ಗ: ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
30 ವರ್ಷದ ಗೋಂದಿಚಟ್ನಳ್ಳಿ ನಿವಾಸಿ ನವೀನ್, ವಿಜಯ್ (33) ಮೃತ ಬೈಕ್ ಸವಾರರು.
ಬೈಕ್ ಸವಾರರು ಉಂಬ್ಳೆಬೈಲಿಗೆ ಸಾಗುತ್ತಿದ್ದಾಗ ತುಂಗಾ ಸೇತುವೆ ಕಡೆಯಿಂದ ತೆರಳುತ್ತಿದ್ದ ಬೈಕ್, ಭದ್ರಾವತಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತವಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


