ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸ ದಿಕ್ಕು: ರಾಘವೇಶ್ವರ ಸ್ವಾಮೀಜಿ
ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

ಗೋಕರ್ಣ: ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.
ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ಸಂದರ್ಭ ಸ್ವಾಮೀಜಿಯವರು ಸ್ವತಃ ಪ್ರಥಮ ಪಾಠ ಬೋಧಿಸಿದರು. ವಿಶ್ವದ ಎಲ್ಲೂ ಸಿಗದ ಪರಿಪೂರ್ಣ, ಅಪೂರ್ವ ಶಿಕ್ಷಣ ನಮ್ಮ ಯುವ ಜನಾಂಗಕ್ಕೆ ಸಿಗಬೇಕು ಎನ್ನುವುದೇ ವಿವಿವಿ ಸ್ಥಾಪನೆಯ ಉದ್ದೇಶ ಎಂದು ಹೇಳಿದರು.
ಚಾಣಕ್ಯ ಇಡೀ ಗುರುಕುಲಕ್ಕೆ ಸ್ಫೂರ್ತಿ. ಆದ್ದರಿಂದ ಅವರ ಹೆಸರಲ್ಲಿ ವಿಶ್ವವಿದ್ಯಾಪೀಠ ಸ್ಥಾಪನೆಯಾಗುತ್ತಿದೆ. ಭಾರತಕ್ಕೆ ತಿರುವು ಕೊಡಬಲ್ಲ ಗುರುಕುಲಗಳ ಶುಭಾರಂಭ ಈ ಮಹತ್ವಾರ್ಯಕ್ಕೆ ಪೀಠಿಕೆ ಮಾತ್ರ ಎಂದು ಬಣ್ಣಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


