ಅನ್ ಲಾಕ್ ಮಾರ್ಗಸೂಚಿ ಬದಲಾಯಿಸಿ ಆದೇಶ ಹೊರಡಿಸಿದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್
ಕೊರೊನಾ ನಿಯಂತ್ರಣಕ್ಕಾಗಿ ಒಂದು ವಾರ ಬೆಂಗಳೂರು, ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ನನ್ನು ಸರ್ಕಾರ ಹೇರಿತ್ತು. ಇಂದಿಗೆ ಜುಲೈ 22ಕ್ಕೆ ಲಾಕ್ ಡೌನ್ ಅವಧಿ ಮುಕ್ತಾಯವಾಗಿದ್ದು ನಾಳೆಯಿಂದ ಲಾಕ್‌ಡೌನ್ ನಿಂದ ಬಿಡುಗಡೆ ದೊರೆಯಲಿದೆ.

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ಒಂದು ವಾರ ಬೆಂಗಳೂರು, ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್‌ಡೌನ್‌ನನ್ನು ಸರ್ಕಾರ ಹೇರಿತ್ತು. ಇಂದಿಗೆ ಜುಲೈ 22ಕ್ಕೆ ಲಾಕ್ ಡೌನ್ ಅವಧಿ ಮುಕ್ತಾಯವಾಗಿದ್ದು ನಾಳೆಯಿಂದ ಲಾಕ್‌ಡೌನ್ ನಿಂದ ಬಿಡುಗಡೆ ದೊರೆಯಲಿದೆ.
ಲಾಕ್‌ಡೌನ್ ತೆರವಾಗಿದೆ ಎಂದು ಜನರ ಮುಕ್ತ ಸಂಚಾರಕ್ಕೆ ಸರ್ಕಾರ ಅವಕಾಶ ಕೊಟ್ಟಿಲ್ಲ. ಬದಲಾಗಿ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿ ನಾಳೆಯಿಂದ ರಾತ್ರಿ ಕರ್ಫ್ಯೂ, ಭಾನುವಾರ ಲಾಕ್‌ಡೌನ್ ಮುಂದುರೆಸುವ ಮೂಲಕ ನಿರ್ಬಂಧ ಹೇರಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಂತೆಯೇ ಭಾನುವಾರ ಲಾಕ್ ಡೌನ್ ಜಾರಿಗೊಳಿಸಿ ಆದೇಶಿಸಿದ್ದಾರೆ. ಅಂತೆಯೇ ಜನಸಂದಣಿಯನ್ನು ತಡೆಯುವ ನಿಟ್ಟಿನಲ್ಲಿ ತರಕಾರಿ ಮಾರುಕಟ್ಟೆ, ಬೆಂಗಳೂರು ಅಲ್ಲದೆ ಜಿಲ್ಲೆ, ತಾಲೂಕು ಮಟ್ಟದಲ್ಲಿ ಎಪಿಎಂಸಿ ಅಥವಾ ಸೂಕ್ತ ವಿಶಾಲ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ. ಉದ್ಯಾನವನಗಳಲ್ಲಿ ಜಿಮ್, ಸಲಕರಣೆಗಳು ಮತ್ತು ಕುಳಿತುಕೊಳ್ಳಲು ಬೆಂಚ್ ಗಳನ್ನು ಬಳಸುವುದನ್ನು ನಿಷೇದಿಸಿ ಅದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


