ರಾಜ್ಯ

ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಬರವಣಿಗೆ: ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಡಿಜಿಪಿಗೆ ದೂರು

ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಬರವಣಿಗೆ: ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಡಿಜಿಪಿಗೆ ದೂರು
ಮುರುಗೇಶ್ ನಿರಾಣಿ
Published On :

ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ ಅವರಿಗೆ ದೂರು ನೀಡಿದ್ದಾರೆ.

ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಬರವಣಿಗೆಯನ್ನು ವಾಟ್ಸ್ಆ್ಯಪ್ ನಲ್ಲಿ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ  ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಡಿಜಿಪಿ ಅವರಿಗೆ ದೂರು ನೀಡಿದ್ದಾರೆ.

ಶಾಸಕ ಮುರುಗೇಶ್ ನಿರಾಣಿ ಅವರು ಜು.21ರಂದು ವಾಟ್ಸ್ಆ್ಯಪ್ ಗ್ರೂಪೊಂದರಲ್ಲಿ  ಹಿಂದೂ ಧರ್ಮದ ಆರಾಧ್ಯ ದೇವತೆಗಳ ವಿರುದ್ಧ ಅವರು ಅವಹೇಳನಕಾರಿ, ನಿಂದನೆಯ  ಪೋಸ್ಟ್ ಅನ್ನು ಫಾರ್ವರ್ಡ್ ಮಾಡಿದ್ದರು. ಇದರಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸವಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಕಾಮಾಕ್ಷಿಪಾಳ್ಯ ನಿವಾಸಿ ಎಸ್ ಹನುಮೇಗೌಡ ಎಂಬುವರು ದೂರಿನಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.