ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ದಿಢೀರ್ ಭೇಟಿ
ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಬೆಂಗಳೂರು: ಸಹಕಾರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಯಶವಂತಪುರ ಹಾಗೂ ರಾಜರಾಜೇಶ್ವರಿ ನಗರ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.
ಕನ್ನಲ್ಲಿ ಹಾಗೂ ಸೂಲಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಸ್ಥಿತಿಗತಿಗಳನ್ನು ವೀಕ್ಷಿಸಿದರು.
ಕೋವಿಡ್ 19 ಸೋಂಕಿತರಿಗೆ ಯಾವ ರೀತಿಯ ವ್ಯವಸ್ಥೆ ಇದೆ? ಆ್ಯಂಬುಲೆನ್ಸ್ ವ್ಯವಸ್ಥೆ ಇದೆಯೇ? ಕೋವಿಡ್ ಸೋಂಕಿತರು ಎಷ್ಟು ಮಂದಿ ಇದ್ದಾರೆ? ಹೋಂ ಕ್ವಾರೆಂಟೇನ್ ನಲ್ಲಿದ್ದವರ ಮೇಲೆ ಯಾವ ರೀತಿ ನಿಗಾ ವಹಿಸಲಾಗುತ್ತಿದೆ? ಔಷಧಗಳ ದಾಸ್ತಾನು ಇದೆಯೇ? ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ಗಮನಕ್ಕೆ ತನ್ನಿ ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಉಪ ವಿಭಾಗಾಧಿಕಾರಿ ಶಿವಣ್ಣ ಸೇರಿದಂತೆ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
ಕೋಕೋಕೋಲಾ ಫೌಂಡೇಶನ್ ಹಾಗೂ ಸಮರ್ಥನಂ ಟ್ರಸ್ಟ್ ವತಿಯಿಂದ ಬಿಬಿಎಂಪಿ ಪೌರ ಕಾರ್ಮಿಕರು ಹಾಗೂ ಸಿಬ್ಬಂದಿ ಕೊಡಲಾಗುತ್ತಿರುವ ಸ್ಯಾನಿಟೈಸರ್, ಮಾಸ್ಕ್, ಹ್ಯಾಂಡ್ ವಾಶ್ ಸಹಿತ ಆರೋಗ್ಯ ಕಿಟ್ ಅನ್ನು ಹೇರೋಹಳ್ಳಿ ವಾರ್ಡ್ ನಂಬರ್ 72 ರಲ್ಲಿ ಸಾಂಕೇತಿಕವಾಗಿ ಸಚಿವ ಸೋಮಶೇಖರ್ ಅವರು ವಿತರಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


