ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಸಿಎಂ ಯಡಿಯೂರಪ್ಪಗೆ ಗೋಕಾಕ್ ನ್ಯಾಯಾಲಯ ಸಮನ್ಸ್ ಜಾರಿ
ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ನಡೆದ ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೋಕಾಕ್'ನ ಜೆಎಂಎಫ್'ಸಿ ನ್ಯಾಯಾಲಯ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

ಬೆಳಗಾವಿ: ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ನಡೆದ ಉಪಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೋಕಾಕ್'ನ ಜೆಎಂಎಫ್'ಸಿ ನ್ಯಾಯಾಲಯ ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ನವೆಂಬರ್ 23 ರಂದು ವಾಲ್ಮೀಕಿ ಸ್ಟೇಡಿಯಂ ನಲ್ಲಿ ನಡೆದ ರ್ಯಾಲಿ ಮಾತನಾಡಿದ್ದ ಯಡಿಯೂರಪ್ಪ ಅವರು, ವೀರಶೈವ-ಲಿಂಗಾಯತ ಸಮುದಾಯದ ಮತದಾರರಿಗೆ ತಮ್ಮ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕೆಂದು ಹೇಳಿದ್ದರು. ಗೋಕಾಕ್‌ನಲ್ಲಿ ಲಿಂಗಾಯತ-ವೀರಶೈವ ಪ್ರಬಲ ಸಮುದಾಯಗಳಾಗಿದ್ದು, ವೀರಶೈವ ಮತದಾರರನ್ನು ಬಲಪಡಿಸುವ ಯತ್ನ ನಡೆಸಿದ್ದರು ಎಂಬ ಆರೋಪಗಳು ಕೇಳಿ ಬಂದಿದ್ದವು.
ಪ್ರಕರಣದ ತನಿಖಾ ಅಧಿಕಾರಿಗಳು ಗೋಕಾಕ್ ಟೌನ್ ಪೊಲೀಸ್ ಠಾಣೆಯಿಂದ ಪ್ರಕರಣವನ್ನು ವಜಾಗೊಳಿಸಲು ನ್ಯಾಯಾಲಯದಲ್ಲಿ ಬಿ-ವರದಿ ಸಲ್ಲಿಸಿದ್ದರು. ಆದರೆ, ಇದನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮುಖ್ಯಮಂತ್ರಿಗಳಿಗ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


