ಕೊರೋನಾಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಲಿ
ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಲಿಯಾಗಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಲಿಯಾಗಿದ್ದಾರೆ.
ಜಿಲ್ಲೆಯ ಶಹಾಬಾದ್ ತಾಲ್ಲೂಕಿನ ಮರತೂರು ಪಂಚಾಯತ್ ನ 58 ವರ್ಷದ ಅಭಿವೃದ್ಧಿ ಅಧಿಕಾರಿ ಸೋಂಕಿನಿಂದ ಶನಿವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಜು. 17ರಂದು ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಜಿಮ್ಸ್ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಕೆಲ ವರ್ಷಗಳ ಹಿಂದೆ ಅವರು ಹೃದ್ರೋಗ ಚಿಕಿತ್ಸೆಗೂ ಒಳಗಾಗಿದ್ದರು ಎನ್ನಲಾಗಿದೆ.
ಹೊನಗುಂಟ ಪಂಚಾಯತ್ ನಲ್ಲಿ 9, ಮರತೂರಿನಲ್ಲಿ 11 ಸಿಬ್ಬಂದಿ ಇವರ ಜೊತೆಗೂಡಿ ಕಾರ್ಯನಿರ್ವಹಿಸಿದ್ದಾರೆ. ಆದರೆ, ಇದೂವರೆಗೆ ಯಾರೊಬ್ಬರಿಗೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


