ರಾಜ್ಯ

ಡ್ಯಾಂನಿಂದ ನೀರು ಬಿಡುಗಡೆಗೂ ಮುನ್ನ ಮಾಹಿತಿ ನೀಡುವುದು ಕಡ್ಡಾಯ: ಹೈಕೋರ್ಟ್

ಮಳೆಗಾಲ ಅಥವಾ ಪ್ರವಾಹದ ಸಂದರ್ಭಗಳಲ್ಲಿ ಯಾವುದೇ ರಾಜ್ಯದ ಜಲಾಶಯಗಳಿಂದ ನೀರು ಹೊರ ಬಿಡುವ ಮುನ್ನ ನೀರು ಹರಿದು ಹೋಗುವ ನೆರೆ ರಾಜ್ಯಗಳಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡುವುದು ಕಡ್ಡಾಯ ಎಂದು ರಾಷ್ಟ್ರೀಯ ವಿಪತ್ತು ಕಾರ್ಯ ನಿರ್ವಹಣಾ ಸಮಿತಿಗೆ ಹೈಕೋರ್ಟ್ ಶುಕ್ರವಾರ ಸೂಚಿಸಿದೆ.

ಡ್ಯಾಂನಿಂದ ನೀರು ಬಿಡುಗಡೆಗೂ ಮುನ್ನ ಮಾಹಿತಿ ನೀಡುವುದು ಕಡ್ಡಾಯ: ಹೈಕೋರ್ಟ್
ಸಂಗ್ರಹ ಚಿತ್ರ
Published On :

ಬೆಂಗಳೂರು: ಮಳೆಗಾಲ ಅಥವಾ ಪ್ರವಾಹದ ಸಂದರ್ಭಗಳಲ್ಲಿ ಯಾವುದೇ ರಾಜ್ಯದ ಜಲಾಶಯಗಳಿಂದ ನೀರು ಹೊರ ಬಿಡುವ ಮುನ್ನ ನೀರು ಹರಿದು ಹೋಗುವ ನೆರೆ ರಾಜ್ಯಗಳಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡುವುದು ಕಡ್ಡಾಯವಾಗಿದ್ದು, ಈ ಕುರಿತು ಕೈಗೊಳ್ಳುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ರಾಷ್ಟ್ರೀಯ ವಿಪತ್ತು ಕಾರ್ಯ ನಿರ್ವಹಣಾ ಸಮಿತಿಗೆ ಹೈಕೋರ್ಟ್ ಶುಕ್ರವಾರ ಸೂಚಿಸಿದೆ. 

ಈ ಕುರಿತು ತುಮಕೂರಿನ ಗುಬ್ಬಿ ತಾಲೂಕು ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. 

ವಿಚಾರಣೆ ವೇಳೆ ನ್ಯಾಯಪೀಠ, ಯಾವುದೇ ರಾಜ್ಯ ತನ್ನ ಜಲಾಶಯದಿಂದ ನೀರಕು ಹೊರಕ್ಕೆ ಹರಿಬಿಟ್ಟರೆ, ಅದಕ್ಕೂ ಮುನ್ನ ಆ ನೀರು ಹರಿದು ಹೋಗುವ ರಾಜ್ಯಕ್ಕೆ ಮಾಹಿತಿ ಹೇಗೆ ಸಿಗುತ್ತದೆ. ಎಂದು ಪ್ರಶ್ನಿಸಿತು. ಅಲ್ಲದೆ. ಈ ಕುರಿತು ನೆರೆ ರಾಜ್ಯಗಳಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡುವುದು ಹಾಗೂ ಈ ಕುರಿತು ಕೈಗೊಳ್ಳುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ರಾಷ್ಟ್ರೀಯ ವಿಪತ್ತು ಕಾರ್ಯ ನಿರ್ವಹಣಾ ಸಮಿತಿಗೆ ಸೂಚನೆ ನೀಡಿ ಆ.7ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.