ಕಸಾಯಿಖಾನೆಗೆ ಸಾಗಿಸುತ್ತಿದ್ದ 17 ಎಮ್ಮೆಗಳ ರಕ್ಷಣೆ: ಇಬ್ಬರ ಬಂಧನ
ಇಲ್ಲಿನ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಎಮ್ಮೆಗಳನ್ನು ಅಬ್ಬೈಲು ಪೊಲೀಸರು ಶನಿವಾರ ರಕ್ಷಿಸಿದ್ದಾರೆ.

ಉಡುಪಿ: ಇಲ್ಲಿನ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಎಮ್ಮೆಗಳನ್ನು ಅಬ್ಬೈಲು ಪೊಲೀಸರು ಶನಿವಾರ ರಕ್ಷಿಸಿದ್ದಾರೆ.
ಕಸಾಯಿಖಾನೆಗೆ ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದ್ದು, ಬಂಧಿತರನ್ನು ದಾವಣಗರೆ ನಿವಾಸಿ ಮೆಹೂಬ್ ಮತ್ತು ಹಾನಗಲ್ ನಿವಾಸಿ ಅಲ್ಲಾ ಬಕ್ಷಿ ಎಂದು ಗುರುತಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗದಿಂದ ಬರುತ್ತಿದ್ದ ಟ್ರಕ್ ಅನ್ನು ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ತಡೆದು ಪರಿಶೀಲಿಸಿದಾಗ ಟ್ರಕ್ ನಲ್ಲಿ ಅಮಾನವೀಯ ರೀತಿಯಲ್ಲಿ ಎಮ್ಮೆಗಳನ್ನು ತುಂಬಿರುವುದು ಕಂಡುಬಂದಿದೆ. ಬಂಧಿತರನ್ನು ಪ್ರಶ್ನಿಸಲಾಗಿ, ಎಮ್ಮೆಗಳನ್ನು ಹಾವೇರಿಯಿಂದ ಮಂಗಳೂರಿಗೆ ಸಾಗಿಸುತ್ತಿರುವುದಾಗಿ ಹೇಳಿದ್ದಾರೆ.
ಅಮಾಸ್‌ಬೈಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ, . ಘಟನೆಗೆ ಸಂಬಂಧಿಸಿದಂತೆ ಅಮಾಸ್‌ಬೈಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


