ಕೋವಿಡ್ ಗೆ ಬಿಬಿಎಂಪಿಯ ಮತ್ತೋರ್ವ ಸಿಬ್ಬಂದಿ ಸಾವು
ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್ ಒಬ್ಬರು ಕೋವಿಡ್ ಸೋಂಕಿನ ಚಿಕಿತ್ಸೆಗೆ ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದಾರೆ. 36 ವರ್ಷದ ರಘುವೇಲು ಮೃತಪಟ್ಟ ದುರ್ದೈವಿ.

ಬೆಂಗಳೂರು: ಬಿಬಿಎಂಪಿಯ ಪುಲಿಕೇಶಿನಗರ ಉಪವಿಭಾಗ ಕಚೇರಿಯ ಅಟೆಂಡರ್ ಒಬ್ಬರು ಕೋವಿಡ್ ಸೋಂಕಿನ ಚಿಕಿತ್ಸೆಗೆ ವೆಂಟಿಲೇಟರ್ ಸಿಗದೆ ಮೃತಪಟ್ಟಿದ್ದಾರೆ. 36 ವರ್ಷದ ರಘುವೇಲು ಮೃತಪಟ್ಟ ದುರ್ದೈವಿ.
ರಘುವೇಲುಗೆ ಶುಕ್ರವಾರ ಜ್ವರ ಕಾಣಿಸಿಕೊಂಡಿದ್ದು, ಕೋವಿಡ್ ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿತ್ತು. ಶನಿವಾರ ಬೆಳಿಗ್ಗೆ
ಅವರನ್ನು ಸಿ.ವಿ.ರಾಮನ್‌ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶನಿವಾರ ಮಧ್ಯಾಹ್ನದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.ಅಲ್ಲಿ ವೆಂಟಿಲೇಟರ್ ವ್ಯವಸ್ಥೆ ಇಲ್ಲದ್ದರಿಂದ ಬೇರೆ ಹಲವು ಆಸ್ಪತ್ರೆಗಳಲ್ಲಿ ವಿಚಾರಿಸಿ, ಕೊನೆಯಲ್ಲಿ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇರುವುದಾಗಿ ತಿಳಿದು ಅಲ್ಲಿಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


