ಕಾರ್ಮಿಕರು, ಭೂಮಿಯ ಸಂಬಂಧಿ ಕಾನೂನು ಮತ್ತಷ್ಟು ಸರಳೀಕರಣ: ಜಗದೀಶ್ ಶೆಟ್ಟರ್
ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಕೋಟಿ ರೂ, ನಷ್ಟ ಅನುಭವಿಸಿದ್ದ ಕೈಗಾರಿಕಾ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗಳ ಹೂಡಿಕೆ ಗುರಿಯನ್ನು ಹೊಂದಿದ್ದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿರುವುದಾಗಿ ಸಹ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಲಕ್ಷಾಂತರ ಕೋಟಿ ರೂ, ನಷ್ಟ ಅನುಭವಿಸಿದ್ದ ಕೈಗಾರಿಕಾ ಕ್ಷೇತ್ರದಲ್ಲಿ ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರೂ.ಗಳ ಹೂಡಿಕೆ ಗುರಿಯನ್ನು ಹೊಂದಿದ್ದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಅಲ್ಲದೆ ಇದೇ ಅವಧಿಯಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿರುವುದಾಗಿ ಸಹ ಅವರು ಭರವಸೆ ನೀಡಿದ್ದಾರೆ.
ಇದನ್ನು ಸಾಧಿಸುವುದಕ್ಕಾಗಿ ಸಚಿವ ಶೆಟ್ಟರ್ ಕರಡು ತಯಾರಿ ಹಾಗೂ ಕ್ಯಾಬಿನೆಟ್ ಹೊಸ ಕೈಗಾರಿಕಾ ನೀತಿಯನ್ನು 2020-2025 ಅನುಮೋದಿಸಲು ಒತ್ತಾಯಿಸಿದ್ದಾರೆ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡುವುದರಿಂದ ಹಿಡಿದು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗಳವರೆಗೆ, ಹೂಡಿಕೆಗಳನ್ನು ಆಕರ್ಷಿಸಲು ನೀತಿ ಬದಲಾವಣೆಗೆ ಶೆಟ್ಟರ್ ಪ್ರಮುಖ ಒತ್ತಾಸೆಯಾಗಲಿದ್ದಾರೆ.
ಕೈಗಾರಿಕಾ ನೀತಿ ಸುಧಾರಣೆಯ ಆಲೋಚನೆಯು ಕಳೆದ ವರ್ಷ ದಾವೋಸ್‌ನಲ್ಲಿ ಶೆಟ್ಟರ್ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರೊಂದಿಗೆ ಡಬ್ಲ್ಯುಇಎಫ್‌ಗೆ ತೆರಳಿದ್ದಾಗಲೇ ಮೊಳಕೆಯೊಡೆದಿತ್ತು. ಇಂದು ಅದು ಗಿಡವಾಗಿ ಬೆಳೆಯುತ್ತಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


