ರಾಜ್ಯ

ಉಗ್ರರ ಚಟುವಟಿಕೆ ಮಟ್ಟಹಾಕಲು ಎನ್ಐಎಯೊಂದಿಗೆ ಸಂಪರ್ಕ: ಬಸವರಾಜ ಬೊಮ್ಮಾಯಿ

ಐಸಿಸ್ ಸೇರಿ ಇತರೆ ಸಂಘಟನೆಗಳ ಉಗ್ರರ ಚಟುವಟಿಕೆಗಳನ್ನು ಕಟ್ಟಿಹಾಕಲು ನಾವೂ ಪಣತೊಟ್ಟಿದ್ದೇವೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳ ಎನ್ಐಎದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯಮಾಡಿಕೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಗ್ರರ ಚಟುವಟಿಕೆ ಮಟ್ಟಹಾಕಲು ಎನ್ಐಎಯೊಂದಿಗೆ ಸಂಪರ್ಕ: ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಐಸಿಸ್ ಸೇರಿ ಇತರೆ ಸಂಘಟನೆಗಳ ಉಗ್ರರ ಚಟುವಟಿಕೆಗಳನ್ನು ಕಟ್ಟಿಹಾಕಲು ನಾವೂ ಪಣತೊಟ್ಟಿದ್ದೇವೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳ ಎನ್ಐಎದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯಮಾಡಿಕೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಭಾರತದಲ್ಲಿ ಉಗ್ರ ಚಟುವಟಿಕೆಗಳಿಗೆ ಸಂಚು ನಡೆಯುತ್ತಿದೆ ಎಂಬ ವಿಶ್ವಸಂಸ್ಥೆ ವರದಿಗೆ ನಗರದಲ್ಲಿ ರವಿವಾರ ಪ್ರತಿಕ್ರಿಯಿಸಿದ ಅವರು, ಕೇರಳ ಹಾಗೂ ಕರ್ನಾಟಕದಲ್ಲಿ ಉಗ್ರರ ಕೃತ್ಯ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ನಾವು ಎನ್ಐಎಯೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಈಗಾಗಲೇ ಬೆಂಗಳೂರು ಹಾಗೂ  ಉಡುಪಿಯಲ್ಲಿ ಎರಡು ಮಾಡೆಲ್ ಗಳಿಗೆ ಇತ್ಯರ್ಥ ಮಾಡಲಾಗಿದೆ. ನಿರಂತರವಾಗಿ ಉಗ್ರರ ಚಟುವಟಿಕೆ ತಡೆಗೆ ಎಲ್ಲಾ ರೀತಿಯ ಕ್ರಮಗಳನ್ನು ಕರ್ನಾಟಕ ಪೊಲೀಸರು ತೆಗೆದುಕೊಂಡಿದೆ ಎಂದು ಹೇಳಿದರು.

ಅಂತೆಯೇ ಕೇವಲ ಎನ್ಐಎ ಮಾತ್ರವಲ್ಲದೇ, ಕೇರಳ, ತಮಿಳುನಾಡು, ತೆಲಂಗಾಣ ಪೊಲೀಸರ ಜೊತೆಯ ಸಂಪರ್ಕದಲ್ಲಿದ್ದೇವೆ. ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದೇವೆ. ನಮ್ಮ ಕಾರ್ಯಾಚರಣೆ ಮೇಲೆಯೇ ವಿಶ್ವಸಂಸ್ಥೆ ವರದಿ ನೀಡಿದೆ. ರಾಜ್ಯದಲ್ಲಿ ಯಾವುದೇ ಉಗ್ರ ಚಟುವಟಿಕೆಗೆ ಅವಕಾಶ ಕೊಟ್ಟಿಲ್ಲ.  ಮುಂದೆಯೂ ಕೊಡುವುದಿಲ್ಲ' ಎಂದೂ ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.