ರಾಜ್ಯ

ಸಂಸತ್ ಅಧಿವೇಶನದ ನಂತರ ವಿಧಾನಸಭೆ ಅಧಿವೇಶನ: ಸಚಿವ ಜೆ.ಸಿ. ಮಾಧುಸ್ವಾಮಿ

ಕೊರೋನಾ ಸಂದರ್ಭದಲ್ಲಿ ಸಂಸತ್ ಅಧಿವೇಶನವನ್ನು ಹೇಗೆ ನಡೆಸುತ್ತಾರೆ ಎಂಬುದನ್ನು ನೋಡಿಕೊಂಡು ಸೆಪ್ಟಂಬರ್‌ನಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಸಂಸತ್ ಅಧಿವೇಶನದ ನಂತರ ವಿಧಾನಸಭೆ ಅಧಿವೇಶನ: ಸಚಿವ ಜೆ.ಸಿ. ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
Published On :

ತುಮಕೂರು: ಕೊರೋನಾ ಸಂದರ್ಭದಲ್ಲಿ ಸಂಸತ್ ಅಧಿವೇಶನವನ್ನು ಹೇಗೆ ನಡೆಸುತ್ತಾರೆ ಎಂಬುದನ್ನು ನೋಡಿಕೊಂಡು ಸೆಪ್ಟಂಬರ್‌ನಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

ಇಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ನಲ್ಲಿ ವಿಧಾನಸಭೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಲೋಕಸಭೆ ಅಧಿವೇಶನ ಮುಗಿದ ನಂತರವಷ್ಟೇ ವಿಧಾನಸಭೆ ಅಧಿವೇಶನ ನಡೆಸುವುದಾಗಿ ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಪಾರ್ಲಿಮೆಂಟ್ ಅಧಿವೇಶನ ಹೇಗೆ ನಡೆಯುತ್ತದೆ ಎಂಬುದನ್ನು ನೋಡಿಕೊಂಡು ಇಲ್ಲಿ ಅಧಿವೇಶನ ನಡೆಸಬೇಕೆಂಬ ತೀರ್ಮಾನ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.