35 ಸಿಬ್ಬಂದಿಗೆ ಕೋವಿಡ್ ಸೋಂಕು; ಧಾರವಾಡದ ಟಾಟಾ ಮಾರ್ಕೋಪೋಲೋ ಘಟಕ 8 ದಿನ ಸ್ಥಗಿತ
ನಗರದ ಹೊರವಲಯದಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಮಾರ್ಕೋಪೋಲೋ ಘಟಕದ 35 ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಘಟಕವನ್ನು 8 ದಿನಗಳ ಕಾಲ ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

ಧಾರವಾಡ: ನಗರದ ಹೊರವಲಯದಲ್ಲಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಮಾರ್ಕೋಪೋಲೋ ಘಟಕದ 35 ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಘಟಕವನ್ನು 8 ದಿನಗಳ ಕಾಲ ಸ್ಥಗಿತಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.
ಟಾಟಾ ಮಾರ್ಕೋಪೋಲೋ ಆಡಳಿತ ಮಂಡಳಿ ಸ್ವಯಂ ಪ್ರೇರಿತವಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟಿಲ್ ಸೋಮವಾರ ಮಾಹಿತಿ ನೀಡಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಘಟಕದ 35 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಅವರೆಲ್ಲರನ್ನೂ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟಕಕ್ಕೆ ಸೋಂಕು ನಿವಾರಣಾ ಔಷಧ ಸಿಂಪಡಿಸಲಾಗಿದ್ದು, ಸೋಂಕು ಹರಡದಂತೆ ಎಲ್ಲಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿಕೆ ನೀಡಿದೆ.
ತಮ್ಮಿಂದ ಕುಟುಂಬ ಸದಸ್ಯರಿಗೆ ಕೂಡ ಸೋಂಕು ಹರಡುತ್ತದೆ ಎಂಬ ಭಯದಿಂದ ಪತ್ನಿ ಹಾಗೂ ಪುತ್ರಿಗೆ ವಿಷ ನೀಡಿ, ಸಿಬ್ಬಂದಿ ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ಎಚ್ಚೆತ್ತ ಕಂಪನಿ, ಉಳಿದ ಸಿಬ್ಬಂದಿಗೆ ಧೈರ್ಯ ತುಂಬುವ ಸಲುವಾಗಿ ಡಿಮಾನ್ಸ್ ನ ಮನಶಾಸ್ತ್ರಜ್ಞರನ್ನು ನೇಮಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


