ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ರಾಜಕಾರಣಿಗಳ ವಿರುದ್ಧದ ಕ್ರಮಗಳ ವರದಿ ನೀಡಿ, ಹೈಕೋರ್ಟ್ ಸೂಚನೆ
ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳು, ಸಿನಿಮಾ ನಟರ ವಿರುದ್ಧ ಕಾನೂನು ಕ್ರಮ ಜರುಗಿಸದ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸಿದ ರಾಜಕಾರಣಿಗಳು, ಸಿನಿಮಾ ನಟರ ವಿರುದ್ಧ ಕಾನೂನು ಕ್ರಮ ಜರುಗಿಸದ ರಾಜ್ಯ ಸರ್ಕಾರದ ಧೋರಣೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಸೆಲೆಬ್ರಿಟಿಗಳು, ರಾಜಕಾರಣಿಗಳಿಗೇನು ಪ್ರತ್ಯೇಕ ಕಾನೂನುಗಳಿವೆಯೇ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ
ತೆಗೆದುಕೊಂಡಿದೆ.
ಲೆಜಿಟ್ ಫೌಂಡೇಷನ್ ಹಾಗೂ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅಜಿರ್ಗಳನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಮಾಸ್ಕ್ ಧರಿಸದೆ, ವ್ಯಕ್ತಿಗತ ಅಂತರ ಪಾಲಿಸದೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಸಿನಿಮಾ ನಟರು ಹಾಗೂ ರಾಜಕಾರಣಿಗಳ ವಿರುದ್ಧದ ಕೈಗೊಂಡ ಕಾನೂನು ಕ್ರಮಗಳ ಕುರಿತ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ತಾಕೀತು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


