ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ: ರಮೇಶ್ ಜಾರಕಿಹೊಳಿ
885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ 885. 80 ಕೋಟಿ ಮೊತ್ತದ ಕಳಸಾ ನಾಲಾ ತಿರುವು ಯೋಜನೆಯ ಪರಿಷ್ಕೃತ ಯೋಜನಾ ವರದಿಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮಹತ್ವಾಕಾಂಕ್ಷೆಯ ಈ ಕಳಸಾ - ಬಂಡೂರಿ ಕುಡಿಯುವ ನೀರಿನ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಭಿನಂದಿಸಿದ್ದಾರೆ.
ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


