ಕೊರೋನಾ ಹಿನ್ನೆಲೆ: ಸಿಇಟಿ ಪರೀಕ್ಷೆ ನಡೆಸುವ ನಿರ್ಧಾರ ಮರುಪರಿಶೀಲಿಸಿ; ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಸುವ ಸಂಬಂಧ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬೆಂಗಳೂರು: ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿರುವ ಸಿಇಟಿ ಪರೀಕ್ಷೆ ನಡೆಸುವ ಸಂಬಂಧ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಜುಲೈ 30, ಆಗಸ್ಟ್ 1ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದ್ದು ಕೊರೋನಾವಿರುವ ಕಂಟೈನ್ಮೆಂಟ್ ಜೋನ್ ಗಳಲ್ಲಿರುವವರು ಹೊರ ಹೋಗುವಂತಿಲ್ಲ. ಅಲ್ಲದೆ ಹೊರರಾಜ್ಯಗಳಿಂದ ಬಂದೂ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಾರೆ. ಕೊರೊನಾ ಎಸ್ಓಪಿಯ ಅನುಸಾರ ಕಂಟೈನ್ಮೆಂಟ್ ಜೋನ್ ನಲ್ಲಿರುವವರು ಹೊರಗೆ ಹೋಗುವಂತಿಲ್ಲ. ಬೆಂಗಳೂರಿನಲ್ಲೇ ಮೂರು ಸಾವಿರದಷ್ಟು ಕಂಟೈನ್ಮೆಂಟ್ ಜೋನ್ ಗಳಿದೆ. ಹಾಗಾಗಿ ಅಲ್ಲಿನ ವಿದ್ಯಾರ್ಥಿಗಳು ಎಲ್ಲಿ ಹೋಗುತ್ತಾರೆ? ಅವರು ಪರೀಕ್ಷೆಯಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಮರುಪರಿಶೀಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ವಕೀಲರಾದ ಎಸ್.ಪಿ. ಪ್ರದೀಪ್ ಕುಮಾರ್ ಹಾಗೂ ಎಸ್. ಹನುಮಂತೇಗೌಡ ಎನ್ನುವವರು ಈ ಸಂಬಂಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಪೀಠ ನಿರ್ಧಾರದ ಮರುಪರಿಶೀಲನೆಗೆ ಸೂಚಿಸಿದ್ದು ಬುಧವಾರ ಮಧ್ಯಾಹ್ನ 2:30ರೊಳಗೆ ಉತ್ತರಿಸುವಂತೆ ಹೇಳಿ ವಿಚಾರಣೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


