ಕಪಾಲಿ ಥಿಯೇಟರ್ ಬಳಿ ನೆಲಕ್ಕುರುಳಿದ ನಾಲ್ಕು ಅಂತಸ್ತಿನ ಕಟ್ಟಡ; ತಪ್ಪಿದ ಭಾರಿ ಅನಾಹುತ
ನಗರದ ಹೃದಯ ಭಾಗದಲ್ಲಿರುವ ಕಪಾಲಿ ಟಾಕೀಸ್ ಹಿಂಭಾಗದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಪಾಲಿ ಟಾಕೀಸ್ ಹಿಂಭಾಗದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಥಿಯೇಟರ್ ಅನ್ನು ಹೊಡೆದು ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಥಿಯೇಟರ್ ಹಿಂದೆ ನಾಲ್ಕು ಅಂತಸ್ತಿನ ಕಟ್ಟಡವೊಂದಿತ್ತು. ಈ ಕಟ್ಟಡವನ್ನು ಇಷ್ಟು ದಿನ ಲಾಡ್ಜ್, ಹೊಟೇಲ್ ಆಗಿ ಬಳಕೆ ಮಾಡಲಾಗುತ್ತಿತ್ತು ಎನ್ನಲಾಗಿದೆ. ಆದರೆ ನಿನ್ನೆ ರಾತ್ರಿ ಸುಮಾರು 9:15 ರ ಹೊತ್ತಿನಲ್ಲಿ ಈ ಕಟ್ಟಡ ಧಿಡೀರನೆ ಕುಸಿದು ಬಿದ್ದಿದೆ.
ಕಟ್ಟಡ ಕುಸಿತವನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಈ ವಿಡಿಯೋ ವೈರಲ್ ಆಗಿದೆ. ಇನ್ನು ಕಟ್ಟಡ ಕುಸಿತದ ಸಂದರ್ಭದಲ್ಲಿ ಈ ಕಟ್ಟಡದಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.
ಮೂಲಗಳ ಪ್ರಕಾರ ಈ ಕಟ್ಟಡದ ಮಾಲೀಕರು ಈ ಕಟ್ಟಡವನ್ನು ಒಡೆದು ಹೊಸ ಕಟ್ಟಡ ನಿರ್ಮಾಣ ಮಾಡಲು ನಿರ್ಧರಿಸಿದ್ದರಂತೆ. ಅಷ್ಟರಲ್ಲಾಗಿಯೇ ಈ ದುರ್ಘಟನೆ ಸಂಭವಿಸಿದೆ. ಇನ್ನು ಸ್ಥಳಕ್ಕೆ ಉಪ್ಪರಾಪೇಟೆ ಪೊಲೀಸರು, ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾಧ್ಯಮವೊಂದು ವರದಿ ಮಾಡಿರುವಂತೆ ಕಟ್ಟಡದ ಇಂಜಿನಿಯರ್ ಮುಸ್ತಫಾ ಎಂಬುವರನ್ನ ಉಪ್ಪಾರಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


