ರಾಜ್ಯ ಸರ್ಕಾರದಿಂದ ಅನ್ ಲಾಕ್ 3 ಮಾರ್ಗಸೂಚಿ ಬಿಡುಗಡೆ: ಭಾನುವಾರ ಲಾಕ್ ಡೌನ್ ರದ್ದು, ರಾತ್ರಿ ಕರ್ಫ್ಯೂ ಸಹ ತೆರವು
ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ.

ಬೆಂಗಳೂರು: ಕೇಂದ್ರ ಸರ್ಕಾರ ಅನ್ ಲಾಕ್-3 ಮಾರ್ಗಸೂಚಿ ಬಿಡುಗಡೆ ಮಾಡಿದ ಮಾರನೇ ದಿನವೇ ರಾಜ್ಯ ಸರ್ಕಾರ ಸಹ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 2ರಿಂದಲೇ ಜಾರಿಗೆ ಬರುವಂತೆ ಭಾನುವಾರದ ಲಾಕ್ ಡೌನ್ ಅನ್ನು ರದ್ದುಗೊಳಿಸಿದೆ.
ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿದ್ದು, ಆಗಸ್ಟ್ 5ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿ ಜಿಮ್ ಮತ್ತು ಯೋಗ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಸಹ ರದ್ದುಗೊಳಿಸಿದೆ.
ಕೋವಿಡ್ ಸೋಂಕು ಹೆಚ್ಚುತ್ತಲೇ ಇರುವುದರಿಂದ ಆಗಸ್ಟ್ 31ರವರೆಗೂ ಶಾಲಾ, ಕಾಲೇಜು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಲು ಅನುಮತಿ ನೀಡಿಲ್ಲ.
ಸದ್ಯಕ್ಕೆ ಮೆಟ್ರೋ ಸಂಚಾರ, ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್, ಮನರಂಜನಾ ಉದ್ಯಾನವನ, ತೆರೆಯುವುದಕ್ಕೆ ಅನುಮತಿ ನೀಡಲಾಗಿಲ್ಲ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪು ಸೇರುವುದರ ಮೇಲಿದ್ದ ನಿರ್ಬಂಧವನ್ನು ಮುಂದುವರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


