ಭೇಟಿಯ ವೇಳೆ ಅಧಿಕಾರಿಗಳು ಗೈರು: ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ
ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ತುಮಕೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.
ಸಚಿವರು ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನಿಂದ ದೊಡ್ಡ ಮೇಟಿ ಕುರ್ಕೆಗೆ ಹೋಗುವ ಮಾರ್ಗ ಮಧ್ಯದಲ್ಲಿರುವ ಬಿದರೆಗುಡಿ ಕವಲುನ ಐಸಿಎಆರ್ ಪ್ರಾಯೋಜಿತ ಕೃಷಿ ವಿಜ್ಞಾನ ಕೇಂದ್ರಕ್ಕೆ ಆಕಸ್ಮಿಕ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ವಿಜ್ಞಾನ ಕೇಂದ್ರದ ಕಚೇರಿಯಲ್ಲಿ ಸಿಬ್ಬಂದಿ ಹಾಜರಾತಿ ಪುಸ್ತಕ ಹಾಗೂ ಇತರ ದಾಖಲೆಗಳನ್ನು ಪರಿಶೀಲಿಸಿದರು. ಪರಿಶೀಲನೆ ವೇಳೆ ದಾಖಲೆಗಳು ಅಸ್ಪಷ್ಟವಾಗಿದ್ದು ಮತ್ತು ಅಧಿಕಾರಿಗಳು ಗೈರು ಹಾಜರಾಗಿದ್ದು ಕಂಡುಬಂತು. ಈ ಬಗ್ಗೆ ಕೇಂದ್ರದಲ್ಲಿ ಗುತ್ತಿಗೆ ಆಧಾರಿತ ಸಿಬ್ಬಂದಿ ಹಾಗೂ ಕೇಂದ್ರದ ಮುಖ್ಯಸ್ಥ ಗೋವಿಂದೇಗೌಡ ಅವರ ಬಗ್ಗೆ ವಿಚಾರಿಸಿದಾಗ ಮುಖ್ಯಸ್ಥರು ಬೆಂಗಳೂರಿಗೆ ಹೋಗಿರುವುದಾಗಿ ತಿಳಿಸಿದರು.
ಇವರ ಉತ್ತರ ಅಸಮರ್ಪಕವೆನಿಸಿದಾಗ ಸಚಿವರು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳೊಂದಿಗೆ ಹಾಗೂ ನ್ಯಾಷನಲ್ ಸೀಡ್ಸ್ ಪ್ರಾಜೆಕ್ಟ್ ಮುಖ್ಯಸ್ಥರೊಂದಿಗೆ ದೂರವಾಣಿಯಲ್ಲಿ ವಿಚಾರಿಸಿದಾಗ, ವಿಜ್ಞಾನ ಕೇಂದ್ರದ ಮುಖ್ಯಸ್ಥರು ಬರದೇ ಗೈರಾಗಿರುವ ಬಗ್ಗೆ ಮಾಹಿತಿ ಲಭ್ಯವಾಯಿತು
ಈ ಬಗ್ಗೆ ಕೃಷಿ ಸಚಿವರು ಬೆಂಗಳೂರಿನ ಕುಲಪತಿಗಳೊಂದಿಗೆ ಚರ್ಚಿಸಿ ಕೂಡಲೇ ತಪ್ಪಿತಸ್ಥರು ಹಾಗೂ ಸರಿಯಾಗಿ ಕಾರ್ಯನಿರ್ವಹಿಸದೇ ಇರುವ ಪದೇಪದೇ ಸಮರ್ಪಕ ಕಾರಣವಿಲ್ಲದೇ ಗೈರಾಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅಮಾನತುಗೊಳಿಸುವಂತೆ ಖಡಕ್ ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


