ಲಾಕ್ ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನಲ್ಲಿ ಹೆಚ್ಚಾದ ಕೊರೋನಾ: ಕಂಟೈನ್ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆ
ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ. ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರ ಪ್ರಮಾಣದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 31ಕ್ಕೇರಿಕೆಯಾಗಿದೆ.
ಕಳೆದ ಒಂದೇ ದಿನದಲ್ಲಿ 7 ವಾರ್ಡ್ ಗಳು ಕಂಟೈನ್ಮೆಂಟ್ ವಲಯಕ್ಕೆ ಸೇರ್ಪಡೆಯಾಗಿವೆ.
ದಾಸರಹಳ್ಳಿ, ಬೊಮ್ಮನಹಳ್ಳಿ ವಲಯದ ಎಚ್ಎಸ್ಆರ್ ಬಡಾವಣೆ ಮತ್ತು ಬೊಮ್ಮನಹಳ್ಳಿ ವಾರ್ಡ್, ಮಹದೇವಪುರ ವಲಯದ ಕಾಡುಗೋಡಿ, ಪೂರ್ವ ವಲಯದ ಅಗರ, ದಕ್ಷಿಣ ವಲಯದ ಸಿದ್ದಾಪುರ, ಹೊಸಹಳ್ಳಿ ಹಾಗೂ ದಾಸರಹಳ್ಳಿ ವಲಯದ ಚೊಕ್ಕಸಂದ್ರ ವಾರ್ಡ್ ಗಳಲ್ಲಿ ಕೊರೋನಾ ಸೋಂಕಿತರು ಕಾಣಿಸಿಕೊಂಡಿದ್ದರಿಂದ ಕಂಟೈನ್ಮೆಂಟ್ ಪ್ರದೇಶಗಳಾಗಿ ಗುರುತಿಸಿಕೊಂಡಿವೆ.
ಕಳೆದ ಕೆಲ ದಿನಗಳಿಂದ ಯಾವುದೇ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆ ವಾರ್ಡ್, ಬೇಗೂರು ವಾರ್ಡ್ ಹಾಗೂ ಬಿಟಿಎಂ ಬಡಾವಣೆ ಕಂಟೈನ್ಮೆಂಟ್ ಪಟ್ಟಿಯಿಂದ ಹೊರಗುಳಿಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


