ರಾಜ್ಯ

ರಾಜ್ಯದಲ್ಲೇ ಪ್ರಥಮ! ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ

ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.

ರಾಜ್ಯದಲ್ಲೇ ಪ್ರಥಮ! ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ
ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಸುದ್ದಿಗೋಷ್ಠಿ
Published On :

ಹುಬ್ಬಳ್ಳಿ: ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64  ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆದ ಪ್ಲಾಸ್ಮಾ ಥೆರಪಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಈ ಸಂಬಂಧ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಒದಗಿಸಿದ್ದಾರೆ.

ಈ ಹಿಂದೆ ಹುಬ್ಬಳ್ಳಿಯಲ್ಲಿ ದಾಖಲಾಗಿ ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದ ರೋಗಿ ಸಂಖ್ಯೆ 363 ಅವರ ಮನವೊಲಿಸಿ ಅವರಿಂದ ಪಾಸ್ಮಾ ಪಡೆದು ಮುಂಬೈನಿಂದ ಆಗಮಿಸಿದ್ದ 64 ವರ್ಷದ ವ್ಯಕ್ತಿಗೆ ಅಳವಡಿಸಿ ಚಿಕಿತ್ಸೆ ನೀಡಲಾಗಿದೆ.

ಪ್ಲಾಸ್ಮಾ ಥೆರಪಿ ನಡೆಸಲು ಕಿಮ್ಸ್ ಗೆ ಐಸಿಎಂಆರ್ ಅನುಮತಿ ನೀಡಿತ್ತು. ಅದರ ಅನುಸಾರ ಆಸ್ಪತ್ರೆ ಚಿಕಿತ್ಸೆ ನೀಡಲು ಎಲ್ಲಾ ತಯಾರಿ ನಡೆಸಿ ದಾನಿಗಳಿಂದ ಪ್ಲಾಸ್ಮಾ ಪಡೆಯುವುದಕ್ಕೆ ಮುಂದಾಗಿತ್ತು. ಪ್ರಾರಂಭದಲ್ಲಿ ಕೋವಿಡ್ ಸೋಂಕಿನಿಂದ ಗುಣ ಹೊಂದಿದ ರೋಗಿಗಳು ಪ್ಲಾಸ್ಮಾ  ದಾನಕ್ಕೆ ಹಿಂದೇಟು ಹಾಕಿದ್ದರು. ಆಗ ವೈದ್ಯರ ತಂಡ ಅವರ ಮನವೊಲಿಸಿ ಪ್ಲಾಸ್ಮಾ  ಪಡೆದು ಚಿಕಿತ್ಸೆ ನೀಡಿದ್ದು ಇದೀಗ ಯಶಸ್ವಿಯಾಗಿದೆ.

ಕಿಮ್ಸ್​ ಆಸ್ಪತ್ರೆಯಲ್ಲಿ ಒಟ್ಟು 49 ಜನ ಕೊವಿಡ್ ಸೋಂಕಿತರು ದಾಖಲಾಗಿದ್ದು ಇದುವರೆಗೆ 22  ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು "ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು 64 ವರ್ಷದ ಕೊರೊನ ಸೋಂಕಿತರೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿ ಗುಣಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿನಂದನೆಗಳು." ಎಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.