ರಾಜ್ಯ

ಕೊರೋನಾ ಭೀತಿ: ಇ-ಆಫೀಸ್ ಮೂಲಕ ಮಾತ್ರ ಕಡತ ಸಲ್ಲಿಸಲು ಸಿಎಂ ಯಡಿಯೂರಪ್ಪ ಸೂಚನೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನುಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ " ಇ - ಆಫೀಸ್ " ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಕೊರೋನಾ ಭೀತಿ: ಇ-ಆಫೀಸ್ ಮೂಲಕ ಮಾತ್ರ ಕಡತ ಸಲ್ಲಿಸಲು ಸಿಎಂ ಯಡಿಯೂರಪ್ಪ ಸೂಚನೆ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನ ಏರಿಕೆಯಾಗುತ್ತಿರುವುದರಿಂದ ಇನ್ನುಮುಂದೆ ತಮ್ಮ ಕಚೇರಿಗೆ ಕಡತಗಳನ್ನು ಭೌತಿಕ ರೂಪದಲ್ಲಿ ಸಲ್ಲಿಸುವ ಬದಲಾಗಿ " ಇ - ಆಫೀಸ್ " ಮೂಲಕ ಮಾತ್ರ ಕಡತ ಮತ್ತು ಪತ್ರಗಳನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಈಗಾಗಲೇ ಜೂನ್ 1ರಿಂದ ಎಲ್ಲಾ ಸಚಿವರ ಕಚೇರಿಗಳಲ್ಲಿ “ಇ - ಆಫೀಸ್ ” ತಂತ್ರಾಂಶವನ್ನು ಅನುಷ್ಠಾನಗೊಳಿಸಿ ಎಲ್ಲ ಕಡತ ಹಾಗೂ ಪತ್ರಗಳನ್ನು ಈ ತಂತ್ರಾಂಶದ ಮೂಲಕ ನಿರ್ವಹಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದೆ.

ಅದೇ ರೀತಿ " ಇ - ಆಫೀಸ್ " ತಂತ್ರಾಂಶವನ್ನು ಬಳಸಿ ತಮ್ಮ ಕಚೇರಿಯಿಂದ ಸಚಿವಾಲಯದ ಎಲ್ಲಾ ಇಲಾಖೆಗಳು / ಅಧೀನ ಸಂಸ್ಥೆಗಳಿಗೆ " ಇ - ಆಫೀಸ್ " ಮೂಲಕವೇ ವ್ಯವಹರಿಸಲಾಗುತ್ತಿದೆ. 

ರಾಜ್ಯ ಮಟ್ಟದ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಕಚೇರಿ, ಎಲ್ಲಾ ಪ್ರಾದೇಶಿಕ ಆಯುಕ್ತರ ಕಚೇರಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್, ಪೋಲಿಸ್ ವರಿಷ್ಠಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿ(ಪ್ರಾದೇಶಿಕ) ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ(ಸಾಮಾಜಿಕ)ಗಳ ಕಚೇರಿಗಳಲ್ಲಿಯೂ " ಇ - ಆಫೀಸ್ " ಅನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.