ರಾಜ್ಯ

ಕೊರೋನಾ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ಚಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಸಿಎಂ

ಕೊರೋನಾ ಸಂಬಂಧಿತ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ವಾಹನ ಚಾಲಕ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿ ಉಮೇಶ್ ಹಡಗಲಿ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 5 ಲಕ್ಷ ರೂ.ಪರಿಹಾರ ನೀಡಿದ್ದಾರೆ.

ಕೊರೋನಾ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ಚಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ಸಿಎಂ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಕೊರೋನಾ ಸಂಬಂಧಿತ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ವಾಹನ ಚಾಲಕ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿ ಉಮೇಶ್ ಹಡಗಲಿ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 5 ಲಕ್ಷ ರೂ.ಪರಿಹಾರ ನೀಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ಅವರು ಮೃತ ಚಾಲಕನ ಪತ್ನಿ ಜ್ಯೋತಿ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಆಂಬುಲೆನ್ಸ್ ವಾಹನ ಚಾಲಕರಾಗಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಉಮೇಶ್ ಹಡಗಲಿ ಅವರು ಕೊರೋನಾ ಸಂಬಂಧಿತ ಕರ್ತವ್ಯದಲ್ಲಿದ್ದಾಗ ಮೇ 27ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಮೃತರ ಪತ್ನಿ ಜ್ಯೋತಿ ಅವರಿಗೆ ಜೂನ್ 1ರಂದು ಮುಖ್ಯಮಂತ್ರಿಯವರು ನೀಡಿದ ಭರವಸೆಯಂತೆ 5 ಲಕ್ಷ ರೂ.ಪರಿಹಾರವಾಗಿ ಮಂಜೂರು ಮಾಡಿದ್ದಾರೆ. 

ಈ ಘಟನೆಗೆ ಸಾಂತ್ವನ ವ್ಯಕ್ತಪಡಿಸಿರುವ ಸೆಲ್ವಕುಮಾರ್ ಅವರು, ನಿಮ್ಮ ಮುಂದಿನ ಜೀವನ ನಿರ್ವಹಣೆ ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ.ಪರಿಹಾರವನ್ನು ತಮ್ಮ ಬ್ಯಾಂಕ್ ಖಾತೆ ಸಂಖ್ಯೆ 89056406618 ಗೆ ಆನ್‌ಲೈನ್ ಮೂಲಕ ಬಿಡುಗಡೆ ಮಾಡಲಾಗುವುದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಚಾಲಕನ ಪತ್ನಿ ಜ್ಯೋತಿ ಅವರು ಪತಿಯ ಅಂತ್ಯ ಸಂಸ್ಕಾರಕ್ಕಾಗಿ ತನ್ನ ಮಂಗಳಸೂತ್ರವನ್ನೇ ಅಡ ಇಟ್ಟಿದ್ದರು. ಇದು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಯಡಿಯೂರಪ್ಪ ಅವರು ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.