ನಿಸರ್ಗ ಚಂಡಮಾರುತ: ಕರ್ನಾಟಕದ ಕರಾವಳಿಯಲ್ಲೂ ಶುರುವಾಯ್ತು ಆತಂಕ, ಹೈಅಲರ್ಟ್ ಘೋಷಣೆ
ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬುಧವಾರ ನಿಸರ್ಗ ಚಂಡಮಾರುತ ಆಪ್ಪಳಿಸುವ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲೂ ಆತಂಕ ಶುರುವಾಗಿದೆ.

ಬೆಂಗಳೂರು: ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ಬುಧವಾರ ನಿಸರ್ಗ ಚಂಡಮಾರುತ ಆಪ್ಪಳಿಸುವ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲೂ ಆತಂಕ ಶುರುವಾಗಿದೆ.
ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದ್ದು, ರಕ್ಕಸ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ. ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರದಲ್ಲಿ ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. 50-60 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿದ್ದು, 2.6ರಿಂದ 3.8 ಕಿಮೀ ಎತ್ತರದವರೆಗೆ ಅಲೆಗಳು ಏಳುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಕೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಳಗ್ಗಿನಿಂದಲೇ ಇಡೀ ದಿನ ನಿರಂತರ ತುಂತುರು ಮಳೆಯಾಗಿದೆ. ಜಿಲ್ಲೆಯ ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ನದಿಗಳ ಹರಿವು ಹೆಚ್ಚಲವಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇನ್ನು ಕೊಡಗಿನಲ್ಲೂ ಸಾಧಾರಣ ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


