ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿದುರಂತ: ಐವರ ಸಜೀವ ದಹನ
ಗುಜರಾತಿನ ದಹೇಜ್ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಐವರು ಜೀವಂತ ಸುಟ್ಟುಕರಕಲಾಗಿದ್ದು ಇತರೆ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಹಮಾದಾಬಾದ್: ಗುಜರಾತಿನ ದಹೇಜ್ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಐವರು ಜೀವಂತ ಸುಟ್ಟುಕರಕಲಾಗಿದ್ದು ಇತರೆ 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಕಾರ್ಯಚರಣೆ ನಡೆಸಿವೆ ಕಾರ್ಖಾನೆಯ ಹತ್ತಿರದಲ್ಲಿದ್ದ ಜನರು ಸುರಕ್ಷಿತವಾಗಿದ್ದಾರೆ. ಬೆಂಕಿಯಿಂದಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ದಟ್ಟ ಹೊಗೆ ಆವರಸಿಕೊಂಡಿದೆ.
ಸುಮಾರು 35ರಿಂದ 40 ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನು ಭಾರುಚ್ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಂಕಿಯ ಜ್ವಾಲೆ ಇಡಿ ಕಾರ್ಖಾನೆಯನ್ನೇ ಆವರಿಸಿಕೊಂಡಿದ್ದು ಎರಡು ಹಳ್ಳಿಯ ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


