ಕ್ವಾರಂಟೈನ್ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್: ಸಿಎಂ ಖಡಕ್ ಎಚ್ಚರಿಕೆ
ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಸಿಇಒ ಮತ್ತು ಪೊಲೀಸ್ ವರಿಷ್ಟಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದರು.
ಈ ವೇಳೆ ಮಾತನಾಡಿರುವ ಅವರು, ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು ಕೇಂದ್ರದಲ್ಲಿ ಮೊಕ್ಕಾಂ ಹೂಡಿ ಕೊರೋನಾ ನಿಯಂತ್ರಣಕ್ಕೆ ಸೂಕ್ರ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬರುವ ಜೂ.8ರಿಂದ ಸಡಿಲಿಕೆಗಳನ್ನು ಮಾಡುತ್ತಿರುವ ಕಾರಣ ಕಟ್ಟೆಚ್ಚರ ವಹಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ತಾಲೂಕು ಕೇಂದ್ರಗಳಲ್ಲಿ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡಬೇಕು. ತಾಲೂಕುಗಳನ್ನು ವಿಭಾಗಿಸಿಕೊಂಡು ಕೆಲಸ ಮಾಡುವಂತೆ ಸೂಚಿಸಿದರು. ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ವಲಸಿಗರಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕೋವಿಡ್-19 ಪರೀಕ್ಷಾ ಕಿಟ್ ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಹೋಮ್ ಕ್ವಾರಂಟೈನ್ ನಲ್ಲಿರುವವರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


