ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಸಿದ್ಧತೆ, ವರ ಯಾರು ಗೊತ್ತಾ?
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ....

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ಥ್ಯ ಜೊತೆ ನಿಶ್ಚಿಯವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಡಿ.ಕೆ ಶಿವಕುಮಾರ್ ಮತ್ತು ಸಿದ್ಧಾರ್ಥ್ ಆತ್ಮೀಯ ಸ್ನೇಹಿತರು ಮಾತ್ರವಲ್ಲ, ಉದ್ಯಮದಲ್ಲಿ ಪಾಲುದಾರರು ಕೂಡ. ಸಿದ್ಧಾರ್ಥ್ ಮಾವ ಅಂದರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಶಿವಕುಮಾರ್ ಗೆ ಹಿಂದೆ ರಾಜಕೀಯ ಗುರುವಾಗಿದ್ದವರು. ಹೀಗಾಗಿ ಸಿದ್ಧಾರ್ಥ್ ಪುತ್ರನೊಂದಿಗೆ ಶಿವಕುಮಾರ್ ಪುತ್ರಿ ವಿವಾಹ ನಡೆಯಲಿದೆ ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಕಾಂಗ್ರೆಸ್ ವಲಯದಿಂದಲಾಗಲೀ ಅಥವಾ ಡಿ.ಕೆ.ಶಿವಕುಮಾರ್ ಆಗಲೀ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


