ಚಾಮರಾಜನಗರ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

ಚಾಮರಾಜನಗರ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.
ಕಮರಹಳ್ಳಿಯ ಮಹೇಶ್ ( 36) ಮೃತ ದುರ್ದೈವಿ. ಕಮರಹಳ್ಳಿಯಿಂದ ಬೇಗೂರಿಗೆ ಬರುತ್ತಿದ್ದ ಬೈಕ್ಗೆ ಆಸೀಫ್ ಎಂಬಾತ ಕಾರು ಡಿಕ್ಕಿ ಹೊಡೆಸಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಈತ ಮಡಿಕೇರಿಯಿಂದ ಬಂದು ಕೇರಳ ಗಡಿಯಲ್ಲಿ ಪ್ರಯಾಣಿಕರೊಬ್ಬರನ್ನ ಕರೆತರಲು ಹೋಗುತ್ತಿರಬೇಕಾದರೆ ಈ ಅವಗಡ ಸಂಭವಿಸಿದೆ,ಘಟನೆ ಸಂಬಂಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕ ಮಹಮ್ಮದ್ ಆಸೀಫ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವರದಿ: ಗುಳಿಪುರ ನಂದೀಶ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


