ರಾಜ್ಯ

ಕೊವಿಡ್-19: ಹೋಂ ಕ್ವಾರಂಟೈನ್ ಗೆ ಸಾರ್ವಜನಿಕರ ಸಹಕಾರ ಕೋರಿದ ಸರ್ಕಾರ

ನೆರೆರಾಜ್ಯಗಳಿಂದ ಆಗಮಿಸಿ ಕ್ವಾರಂಟೈನ್ ಆಗಿರುವವರ ಚಲನೆಯನ್ನು ನಿಯಂತ್ರಿಸಲು ನೆರವು ನೀಡುವಂತೆ ರಾಜ್ಯ ಸರ್ಕಾರ ಸಾರ್ವಜನಿಕರು, ನಿವಾಸಿಗಳ ಕಲ್ಯಾಣ ಸಂಘ ಮತ್ತು ವಾಣಿಜ್ಯ ಮಳಿಗೆಗಳಿಗೆ ಮನವಿ ಮಾಡಿದೆ.

ಕೊವಿಡ್-19: ಹೋಂ ಕ್ವಾರಂಟೈನ್ ಗೆ ಸಾರ್ವಜನಿಕರ ಸಹಕಾರ ಕೋರಿದ ಸರ್ಕಾರ
ಕ್ವಾರಂಟೈನ್ ಸೀಲ್
Published On :

ಬೆಂಗಳೂರು: ನೆರೆರಾಜ್ಯಗಳಿಂದ ಆಗಮಿಸಿ ಕ್ವಾರಂಟೈನ್ ಆಗಿರುವವರ ಚಲನೆಯನ್ನು ನಿಯಂತ್ರಿಸಲು ನೆರವು ನೀಡುವಂತೆ ರಾಜ್ಯ ಸರ್ಕಾರ ಸಾರ್ವಜನಿಕರು, ನಿವಾಸಿಗಳ ಕಲ್ಯಾಣ ಸಂಘ ಮತ್ತು ವಾಣಿಜ್ಯ ಮಳಿಗೆಗಳಿಗೆ ಮನವಿ ಮಾಡಿದೆ. 

ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ. ಎಲ್ಲಾ ಶಾಲೆಗಳು, ವಾಣಿಜ್ಯ ಮಳಿಗೆಗಳು, ಕಚೇರಿಗಳು, ಕಾರ್ಖಾನೆಗಳು, ಮಾಲ್ ಗಳೂ, ಧಾರ್ಮಿಕ ಸ್ಥಳಗಳು, ಹೋಟೆಲ್ ಗಳು ಇತ್ಯಾದಿಗಳ ಸಿಬ್ಬಂದಿ, ತಮ್ಮ ಕಟ್ಟಡದ ಆವರಣಕ್ಕೆ ಆಗಮಿಸುವ ಗ್ರಾಹಕರ ಕೈಯಲ್ಲಿ ಕ್ವಾರಂಟೈನ್ ಮುದ್ರೆಯಿದೆಯೆ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದೆ.

ಇಂತಹ ವ್ಯಕ್ತಿಗಳು ಅಂಗಡಿಗಳಿಗೆ ಇಲ್ಲವೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಕಂಡುಬಂದಲ್ಲಿ ಆ ಕುರಿತು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸರ್ಕಾರ ಮನವಿ ಮಾಡಿದೆ.

ನಿಯಮಗಳನ್ನು ಮೀರಿ ಹೊರ ರಾಜ್ಯದ ವ್ಯಕ್ತಿಗಳು ಅಂಗಡಿ ಮುಂಗಟ್ಟುಗಳನ್ನು ಪ್ರವೇಶಿಸಿದರೆ ತಕ್ಷಣವೇ ಪೊಲೀಸ್ ಸಹಾಯವಾಣಿ 100 ಕ್ಕೆ ಕರೆ ಮಾಡಬೇಕು ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.