ರಾಜ್ಯ

ಚಾಮರಾಜನಗರ: ಫೋನ್ ಕರೆ ಬಂತೆಂದು ಹೋದ ವ್ಯಕ್ತಿ ಶವವಾಗಿ ಪತ್ತೆ!

ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ‌ ವೆಂಕಟಯ್ಯನ ಛತ್ರದಲ್ಲಿ ನಡೆದಿದೆ.

ಚಾಮರಾಜನಗರ: ಫೋನ್ ಕರೆ ಬಂತೆಂದು ಹೋದ ವ್ಯಕ್ತಿ ಶವವಾಗಿ ಪತ್ತೆ!
ಸಂಗ್ರಹ ಚಿತ್ರ
Published On :

ಚಾಮರಾಜನಗರ: ಗ್ರಾಮ ಪಂಚಾಯ್ತಿ ಬಿಲ್ ಕಲೆಕ್ಟರ್ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ‌ ವೆಂಕಟಯ್ಯನ ಛತ್ರದಲ್ಲಿ ನಡೆದಿದೆ.

ಬಸವರಾಜು(35) ಮೃತಪಟ್ಟ ವ್ಯಕ್ತಿ. ಅದೇ ಗ್ರಾಮದ ಮಹಿಳೆಯೊಬ್ಬರ ಮನೆ ಮುಂದೆ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದಾರೆ. ಬುಧವಾರ ರಾತ್ರಿ ಫೋನ್ ಕರೆ ಬಂತೆಂದು ತೆರಳಿದ ಬಸವರಾಜು ಇಂದು ಬೆಳಗ್ಗೆ ಶವದ ರೂಪದಲ್ಲಿ ಮಹಿಳೆ ಮನೆಯ ಮುಂದೆ ಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.