ರಾಜ್ಯ

ಪಾದರಾಯನಪುರ ಪುಂಡರ ಜಾಮೀನಿಗೆ ಕಾರ್ಪೋರೇಟರ್ ಶೂರಿಟಿ!

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ 126 ಮಂದಿ ಆರೋಪಿಗಳ ಜಾಮೀನಿಗೆ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರೇ ಶ್ಯೂರಿಟಿ ನೀಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.

ಪಾದರಾಯನಪುರ ಪುಂಡರ ಜಾಮೀನಿಗೆ ಕಾರ್ಪೋರೇಟರ್ ಶೂರಿಟಿ!
ಕಾರ್ಪೋರೇಟರ್ ಇಮ್ರಾನ್ ಪಾಷಾ
Published On :

ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ 126 ಮಂದಿ ಆರೋಪಿಗಳ ಜಾಮೀನಿಗೆ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವರೇ ಶ್ಯೂರಿಟಿ ನೀಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಆರೋಪಿಗಳ ಪೈಕಿ ತಾವು 120 ಮಂದಿಗೆ ಜಾಮೀನು ನೀಡಿರುವುದಾಗಿ ಕಾರ್ಪೋರೇಟರ್ ಇಮ್ರಾನ್ ಪಾಷಾ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಮಾಧ್ಯಮದೊಂದಿಗೆ ಫೋನ್ ಮೂಲಕ ಮಾತನಾಡಿದ ಇಮ್ರಾನ್ ಪಾಷಾ ಅವರು, ಬಂಧಿತ 126 ಮಂದಿಯ ಪೈಕಿ 120 ಮಂದಿ ಅಮಾಯಕರು. ಅವರನ್ನು ಪೊಲೀಸರು ಸುಖಾಸುಮ್ಮನೆ ಬಂಧಿಸಿದ್ದಾರೆ. ಅಂದು ನಡೆದ ಗಲಾಟೆಯಲ್ಲಿ ಅವರು ಗಲಾಟೆಯಲ್ಲಿ ಪಾಲ್ಗೊಂಡಿರಲಿಲ್ಲ. ಬದಲಿಗೆ ಅಲ್ಲಿ ನಿಂತು ನೋಡುತ್ತಿದ್ದರು. ಇದನ್ನೇ ಸಾಕ್ಷಿಯಾಗಿ ಸ್ವೀಕರಿಸಿದ ಪೊಲೀಸರು ಅವರನ್ನೂ ಕೂಡ ಬಂಧಿಸಿದ್ದರು. ಇವರೆಲ್ಲರೂ ಅಮಾಯಕರು ಮತ್ತು ಬಡವರು ಎಂದು ಇಮ್ರಾನ್ ಪಾಷಾ ಹೇಳಿದ್ದಾರೆ.

ಅಲ್ಲದೆ ಬಂಧಿತರ ಕುಟುಂಬಸ್ಥರು ನಿತ್ಯವೂ ತಮ್ಮ ಮನೆ ಬಳಿ ಬಂದು ತಮ್ಮವರು ಅಮಾಯಕರು. ಸುಖಾಸುಮ್ಮನೆ ಪೊಲೀಸರು ಎಳೆದುಕೊಂಡು ಹೋಗಿದ್ದಾರೆ ಎಂದು ಅಳಲು ತೋಡಿಕೊಂಡಿದ್ದರು. ಆಲ್ಲದೆ ಈ ಕುರಿತು ನಾನು ಕೂಡ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಅಮಾಯಕರನ್ನು ಬಿಟ್ಟುಬಿಡುವಂತೆ ಮನವಿ ಮಾಡಿದ್ದೆ. ಇದೀಗ ಅವರಿಗೆ ಜಾಮೀನು ದೊರೆತಿದೆ ಎಂದು ಹೇಳಿದ್ದಾರೆ. 

ಕಳೆದ ಮೇ 30 ರಂದು ಕರ್ನಾಟಕ ಹೈಕೋರ್ಟ್ ಪ್ರಕರಣದ ಎಲ್ಲ 126 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಅಲ್ಲದೆ ತಲಾ 1 ಲಕ್ಷ ರೂ ಭದ್ರತಾ ಠೇವಣಿ (ಶ್ಯೂರಿಟಿ) ಇಡುವಂತೆ ಸೂಚಿಸಿತ್ತು. 

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.