ರಾಜ್ಯ

ಕೊಪ್ಪಳ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ, ಹೆಣ್ಣು ಚಿರತೆ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇಂದು ನಡೆದಿದೆ.

ಕೊಪ್ಪಳ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ, ಹೆಣ್ಣು ಚಿರತೆ ಸ್ಥಳದಲ್ಲೇ ಸಾವು
ಸಾವನ್ನಪ್ಪಿರುವ ಚಿರತೆ ಚಿತ್ರ
Published On :

ಗಂಗಾವತಿ: ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇಂದು ನಡೆದಿದೆ. 

ಹೇಮಗುಡ್ಡ ಗ್ರಾಮದ ಹೊರವಲಯದ ಗಿಣಿಗೇರಾ- ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಆಗಷ್ಟೇ ಬೇಟೆಯಾಡಿ ಆಹಾರವನ್ನು ಬಾಯಲ್ಲಿ ಕಚ್ಚಿಕೊಂಡು ರಸ್ತೆ ದಾಟುತ್ತಿದ್ದ ಚಿರತೆಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಇದರಿಂದಾಗಿ  ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಸ್ಥಳದಲ್ಲಿಯೇ ಮೃತಪಟ್ಟಿದೆ. 

ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ಚಿರತೆಯನ್ನು  ಗಮನಿಸಿದ ಸ್ಥಳೀಯ ಕೆಲ ಯುವಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿ ರಾಮಣ್ಣ, ಚಿರತೆ ಕಳೇಬರವನ್ನು ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ  ಬಳಿಕ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ. 

ವರದಿ: ಶ್ರೀನಿವಾಸ .ಎಂ.ಜೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.