ರಾಜ್ಯ

ಉಡುಪಿಯಲ್ಲಿ ಒಂದೇ ದಿನ 204 ಪ್ರಕರಣ ಪತ್ತೆ, ಜೂನ್ 7ರ ಬಳಿಕ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ ಸಾಧ್ಯತೆ

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಅತೀ ಹೆಚ್ಚು 204 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ರಾಜ್ಯದಲ್ಲಿಯೇ ಅತೀ ಹೆಚ್ಚು 768 ಆಗಿದೆ. ಈ 204 ಸೋಂಕಿತರಲ್ಲಿ ಮುಂಬೈಯಿಂದ ಬಂದವರು 203 ಆಗಿದ್ದರೆ, ಒಬ್ಬರು ಉಡುಪಿ ಜಿಲ್ಲೆಯ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.

ಉಡುಪಿಯಲ್ಲಿ ಒಂದೇ ದಿನ 204 ಪ್ರಕರಣ ಪತ್ತೆ, ಜೂನ್ 7ರ ಬಳಿಕ ಸೋಂಕಿತರ ಸಂಖ್ಯೆ ಗಣನೀಯ ಇಳಿಕೆ ಸಾಧ್ಯತೆ
ಸಂಗ್ರಹ ಚಿತ್ರ
Published On :

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ ಅತೀ ಹೆಚ್ಚು 204 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ರಾಜ್ಯದಲ್ಲಿಯೇ ಅತೀ ಹೆಚ್ಚು 768 ಆಗಿದೆ. ಈ 204 ಸೋಂಕಿತರಲ್ಲಿ ಮುಂಬೈಯಿಂದ ಬಂದವರು 203 ಆಗಿದ್ದರೆ, ಒಬ್ಬರು ಉಡುಪಿ ಜಿಲ್ಲೆಯ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. 

ಜಿಲ್ಲೆಗೆ ಮಹಾರಾಷ್ಟ್ರ ರಾಜ್ಯವೊಂದರಿಂದಲೇ ಸುಮಾರು 8,500ಕ್ಕೂ ಅಧಿಕ ಮಂದಿ ಬಂದಿದ್ದು, ಅವರೆಲ್ಲರ ಕೊರೋನಾ ಪರೀಕ್ಷೆಯ ವರದಿ ಬಂದಿದೆ. ಜಿಲ್ಲೆಯ ಒಟ್ಟು 768 ಸೋಂಕಿತರಲ್ಲಿ ಮುಂಬೈಯಿಂದ ಬಂದ ಸೋಂಕಿತರ ಸಂಖ್ಯೆಯೇ 636 ಆಗಿದೆ. ಉಳಿದಂತೆ 110 ಮಂದಿ ಸೋಂಕಿತರ ಪೊಲೀಸರು ಸ್ಥಳೀಯರಾಗಿದ್ದರೆ, ಉಳಿದವರು ಬೇರೆ ರಾಜ್ಯ-ದೇಶಗಳಿಂದ ಬಂದವರಾಗಿದ್ದಾರೆ. 

ಪ್ರಸ್ತುತ ಜಿಲ್ಲೆಯಲ್ಲಿ ಮುಂಬೈಯಿಂದ ಬರುತ್ತಿರುವವರ ಸಂಖ್ಯೆ ಕಡಿಮೆಯಾಗಿದ್ದು, ಇನ್ನು ಕೆಲವು ದಿನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯೂ ಗಣನೀಯವಾಗಿ ಕಡಿಮೆಯಾಗಲಿದೆ. ಆದರೆ, ಇನ್ನೂ ಜಿಲ್ಲೆಯ ಸಾವಿರಾರು ಮಂದಿ ಮುಂಬೈಯಿಂದ ಊರಿಗೆ ಬರಲು ಸಿದ್ಧರಾಗಿದ್ದಾರೆ. ಅವರು ಊರಿಗೆ ಬಂದರೆ ಮತ್ತೆ ಜಿಲ್ಲೆಗೆ ಮುಂಬೈ ಸೋಂಕು ತಪ್ಪಿದ್ದಲ್ಲ. 

ಶುಕ್ರವಾರದವರೆಗೂ ಒಟ್ಟಾರೆ 2,000 ಸ್ಯಾಂಪಲ್ಸ್ ಪರೀಕ್ಷೆಗೆ ಬಂದಿದ್ದವು, ಇದರಲ್ಲಿ ಶೇ.10ರಷ್ಟು ಪಾಸಿಟಿವ್ ಪ್ರಕರಣ ಕಂಡು ಬಂದಿತ್ತು. ಶನಿವಾರ ಮತ್ತೊಂದು ಬ್ಯಾಚ್'ನ 1,000 ಸ್ಯಾಂಪಲ್ಸ್ ಗಳು ಬರಲಿವೆ. ಭಾನುವಾರದಿಂದ ಇಷ್ಟೊಂದು ಸಂಖ್ಯೆಯ ಸ್ಯಾಂಪಲ್ಸ್ ಗಳನ್ನು ಪರೀಕ್ಷೆಗೆ ಕಳುಹಿಸುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.