ಬೆಂಗಳೂರು: ಮಹಾಮಾರಿ ಕೊರೋನಾಗೆ ಮತ್ತೊಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 60ಕ್ಕೆ ಏರಿಕೆ
ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾನುವಾರ ರಾಜ್ಯದಲ್ಲಿ ಮಹಾಮಾರಿ ವೈರಸ್'ಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಭಾನುವಾರ ರಾಜ್ಯದಲ್ಲಿ ಮಹಾಮಾರಿ ವೈರಸ್'ಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನ ಅಗ್ರಹಾರ ದಾಸರಹಳ್ಳಿ ನಿವಾಸಿಯಾಗಿದ್ದ 61 ವರ್ಷದ ವೃದ್ಧೆಯೊಬ್ಬರು ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಕೆಲ ದಿನಗಳ ಹಿಂದಷ್ಟೇ ದಾಖಲಾಗಿದ್ದರು. ಈ ವೇಳೆ ಮಹಿಳೆಯಲ್ಲಿ ವೈರಸ್ ಇರುವುದು ದೃಢಪಟ್ಟಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೆಂಗಳೂರು ನಗರದಲ್ಲಿ ಈ ವರೆಗೂ ಒಟ್ಟಾರೆ 13 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದ್ದು, ಈ ವರೆಗೂ 1968 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಇನ್ನೂ 3184 ಮಂದಿ ಸೋಂಕಿನಿಂದ ಕೋವಿಡ್-19 ಚಿಕಿತ್ಸೆ ನಿಯೋಜಿತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


