ನಟಿ ಚಂದನಾ ಆತ್ಮಹತ್ಯೆ ಪ್ರಕರಣ: ಪ್ರಿಯಕರ ದಿನೇಶ್ ಬಂಧನ
ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿನೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಟಿ ಚಂದನಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿನೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನಲ್ಲಿ ಮೇ 28ರಂದು ಸಹನಟಿ ಚಂದನಾ(29) ಸೆಲ್ಫಿ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು.
ಆರೋಪಿ ದಿನೇಶ್ನನ್ನು ಕಳೆದ 5 ವರ್ಷಗಳಿಂದ ಚಂದನಾ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಪಡೆದಿದ್ದ ಹಾಗೂ ದೈಹಿಕವಾಗಿ ಚಂದನಾರನ್ನು ಬಳಸಿಕೊಂಡಿದ್ದ ಎಂದು ದೂರು ನೀಡಲಾಗಿತ್ತು.
ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗಿದ್ದ ಚಂದನಾ ಮೇ 28ರಂದು ವಿಷಪ್ರಾಶನ ಮಾಡಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


