ಕೊರೋನಾ ಇಲ್ಲದಿದ್ದರೂ ಬೆಳಗಾವಿಯಲ್ಲಿ ಆತಂಕ ಸೃಷ್ಟಿಸಿದ ವ್ಯಕ್ತಿ ಸಾವು!
ಮುಂಬೈನಿಂದ ಬೆಳಗಾವಿ ತಾಲೂಕಿನ ಕಟ್ಟನಬಾಂವಿ ಗ್ರಾಮಕ್ಕೆ ಆಗಮಿಸಿತ್ತ ವ್ಯಕ್ತಿಯೊಬ್ಬ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದು, ವ್ಯಕ್ತಿಯ ಸಾವು ಬೆಳಗಾವಿಯಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಘಟನೆ ಶನಿವಾರ ನಡೆದಿದೆ.

ಬೆಳಗಾವಿ: ಮುಂಬೈನಿಂದ ಬೆಳಗಾವಿ ತಾಲೂಕಿನ ಕಟ್ಟನಬಾಂವಿ ಗ್ರಾಮಕ್ಕೆ ಆಗಮಿಸಿತ್ತ ವ್ಯಕ್ತಿಯೊಬ್ಬ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದು, ವ್ಯಕ್ತಿಯ ಸಾವು ಬೆಳಗಾವಿಯಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಘಟನೆ ಶನಿವಾರ ನಡೆದಿದೆ.
ಶುಕ್ರವಾರವಷ್ಟೇ ಕಟ್ಟನಬಾಂವಿ ಗ್ರಾಮದ ಐವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಆತಂಕದ ನಡುವೆಯೇ ಮುಂಬೈನಿಂದ ಗ್ರಾಮಕ್ಕೆ ಮರಳಿ ಬಂದಿದ್ದ 50 ವರ್ಷದ ವ್ಯಕ್ತಿ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮೃತ ವ್ಯಕ್ತಿ 7 ದಿನಗಳ ಕಾಲ ಕ್ವಾರಂಟೈನ್ ನಲ್ಲಿದ್ದ. ಜೂನ್ 4ರಂದು ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಈತನ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೋವಿಡ್ ಪ್ರಕರಣದ ವರದಿ ಬರುವುದಕ್ಕೂ ಮುಂಚೆಯೇ ವ್ಯಕ್ತಿ ಸಾವನ್ನಪ್ಪಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.
ಈತ ಮುಂಬೈನ ಸಂತಾಕ್ರೂಸ್ ನಲ್ಲಿ ಆಟೋ ರಿಕ್ಷಾ ಓಡಿಸುತ್ತಿದ್ದ. ಲಾಕ್'ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ತಮ್ಮ ೂರಿಗೆ ಬಂದಿದ್ದ. ಈತನಿಗೆ ಯಾವುದೇ ರೀತಿಯ ಕೊರೋನಾ ಸೋಂಕಿತ ಲಕ್ಷಣಗಲು ಕಂಡು ಬಂದಿರಲಿಲ್ಲ. ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆಂದು ಹೇಳಲಾಗುತ್ತಿದೆ. ಕೋವಿಡ್-19 ಕುರಿತು ವರದಿ ಬಂದ ನಂತರವಷ್ಟೇ ಈ ವ್ಯಕ್ತಿಯ ಸಾವಿನ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


