ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿ, ತಂದೆ, ಮೂರು ವರ್ಷದ ಮಗ ಸಾವು
ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ.

ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ.
ತುರ್ಚಗಟ್ಟ ನಿವಾಸಿ ಸಿದ್ದೇಶ್(30), 3 ವರ್ಷದ ಮಗ ಮೃತ ದುರ್ದೈವಿಗಳು.
ತಂದೆ-ಮಗ ತುರ್ಚಗಟ್ಟದಿಂದ ದಾವಣಗೆರೆಗೆ ಬರುತ್ತಿದ್ದಾಗ ಮತ್ತೊಂದು ಬೈಕ್‍ನಲ್ಲಿ ವೇಗವಾಗಿ ಬಂದ ಯುವಕರು ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಎರಡೂ ಬೈಕ್‍ಗಳು ನುಜ್ಜುಗುಜ್ಜಾಗಿದ್ದು, ಕೆಳಗೆ ಬಿದ್ದ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಯುವಕರು ಅತಿ ವೇಗದಲ್ಲಿ ಬೈಕ್ ಓಡಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


